ಮೈಸೂರು:– ಮೈಸೂರಿನ ಡಿಆರ್‌ಸಿ ಮಾಲ್‌ನಲ್ಲಿ ದುರಂತ ಸಂಭವಿಸಿದೆ. ಮಾಲ್‌ನ ನಾಲ್ಕನೇ ಅಂತಸ್ತಿನಲ್ಲಿ ಕೆಲಸ ಮಾಡುವಾಗ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜರುಗಿದೆ.
27 ವರ್ಷದ ಸುನೀಲ್ ಮೃತ ದುರ್ದೈವಿ. ಘಟನೆಯಲ್ಲಿ ಚಂದ್ರು ಎಂಬ ಮತ್ತೊರ್ವ ಯುವಕ ಗಾಯಗೊಂಡಿದ್ದಾರೆ. ಇವರಿಬ್ಬರು ಮಾಲ್‌ನಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಸೋಮವಾರ ಡಿಆರ್‌ಸಿ ಮಾಲ್‌ನ ನಾಲ್ಕನೇ ಮಹಡಿಯಲ್ಲಿದ್ದ ಬೋರ್ಡ್‌ವೊಂದನ್ನು ಸುನೀಲ್ ತೆರವು ಮಾಡುತ್ತಿದ್ದರು. ಈ ವೇಳೆ ಗಮನಕ್ಕೆ ಬಾರದೇ ಪಿಒಪಿ ಮೇಲೆ ಕಾಲಿಟ್ಟು ಕೆಳಗೆ ಕುಸಿದರು. ತಕ್ಷಣ ಕೈಗೆ ಸಿಕ್ಕಿದ್ದ ರಾಡ್‌ವೊಂದನ್ನು ಹಿಡಿದುಕೊಂಡು ನೇತಾಡುತ್ತಿದ್ದರು. ಇದನ್ನು ಗಮನಿಸಿದ ಚಂದ್ರು ಸಹಾಯಕ್ಕೆ ಮುಂದಾಗಿದ್ದು, ಇವರೂ ಕೂಡ ಪಿಒಪಿ ಮೇಲೆ ಕಾಲಿಟ್ಟು ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಈ ವೇಳೆ ರಾಡ್ ಹಿಡಿದುಕೊಂಡಿದ್ದ ಸುನೀಲ್ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಜಯಲಕ್ಷ್ಮಿಪುರಂ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.