ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಇಂದು ಪ್ರಕರಣದ ವಿಚಾರಣೆ ನಡೆದಿದ್ದು ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ಕೋರ್ಟ್ ನಿರಾಕರಿಸಿದೆ. ಅಲ್ಲದೆ ದರ್ಶನ್ ಮನವಿ ಮಾಡಿದ್ದ ಕೆಲವು ಬೇಡಿಕೆಗಳನ್ನು ಈಡೇರಿಸಲು ಸಮ್ಮತಿಸಿದೆ.
ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವಂತೆ ವಕೀಲ ಪ್ರಸನ್ನ ಕುಮಾರ್ ಮನವಿ ಮಾಡಿದ್ದರು. ಆದ್ರೆ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡದಂತೆ ದರ್ಶನ್ ಪರ ವಕೀಲರು ವಾದಿಸಿದ್ದರು. ಎರಡು ಕಡೆಯ ವಾದ ವಿವಾದ ಆಲಿಸಿದ ನ್ಯಾಯಾಧೀಶರು ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ಸಕಾರಣಗಳಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ ದರ್ಶನ್ಗೆ ಜೈಲಿನ ಆವರಣದಲ್ಲಿ ಓಡಾಡಲು ಅನುಮತಿ ಕೊಟ್ಟಿದೆ.
ಹೆಚ್ಚುವರಿ ದಿಂಬು ಹಾಗೂ ಬೇಡ್ಶೀಟ್ಗಾಗಿ ದರ್ಶನ್ ಮಾಡಿದ್ದ ಮನವಿಯನ್ನು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯ ಪುರಸ್ಕರಿಸಿದೆ. ದರ್ಶನ್ಗೆ ಹೆಚ್ಚುವರಿ ಹಾಸಿಗೆ ಮತ್ತು ದಿಂಬು ನೀಡಲು ಅನುಮತಿ ನೀಡಿದೆ. ಆದರೆ, ಜೈಲಿನ ಕೈಪಿಡಿ ಅನುಸರಿಸಬೇಕು ಎಂದು ನ್ಯಾಯಾಲಯ ಸೂಚನೆ ನೀಡಿದೆ.
ಜೈಲು ನಿಯಮ ಉಲ್ಲಂಘಿಸಿದರೆ ಜೈಲು ಐಜಿಯಿಂದ ಕ್ರಮ ಜರುಗಿಸಬೇಕು. ನಿಯಮ ಉಲ್ಲಂಘಿಸಿದ್ದೇ ಆದಲ್ಲಿ ಬೇರೆ ಜೈಲಿಗೆ ಸ್ಥಳಾಂತರಿಸಲು ಐಜಿ ಕ್ರಮ ಕೈಗೊಳ್ಳಬಹುದು ಎಂದೂ ಆದೇಶದಲ್ಲಿ ನ್ಯಾಯಾಲಯ ತಿಳಿಸಿದೆ.