ಗದಗ: ಹುಲಕೋಟಿಯ ರೂರಲ್ ಮೆಡಿಕಲ್ ಸರ್ವಿಸ್ ಸೊಸೈಟಿ ನರ್ಸಿಂಗ್ ಸೈನ್ಸಸ್ ಕಾಲೇಜಿನಲ್ಲಿ ಮಾಜಿ ರಾಷ್ಟ್ರಪತಿ, ಅಪ್ರತಿಮ ಶಿಕ್ಷಕರಾಗಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ನಿಮಿತ್ತ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಡಾ. ಬಸಯ್ಯ ಹುಣಸಗಿಮಠ ಡಾ. ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
Advertisement