HomeKarnataka Newsಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 30 ವರ್ಷ ಜೈಲು ಶಿಕ್ಷೆ!

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 30 ವರ್ಷ ಜೈಲು ಶಿಕ್ಷೆ!

For Dai;y Updates Join Our whatsapp Group

Spread the love

ಚಿಕ್ಕೋಡಿ:- ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾದ ಹಿನ್ನೆಲೆ ಅಪರಾಧಿಗೆ 30 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿ ಬೆಳಗಾವಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆದೇಶ ಹೊರಡಿಸಿದೆ.

ಶಿಕ್ಷೆಗೊಳಗಾದ ಅಪರಾಧಿಯನ್ನು ಆಕಾಶ್ ಅಲಿಯಾಸ್ ಅಕ್ಷಯ್ ಮಹಾದೇವ್ಮ ಸಾಳುಂಕೆ ಎಂದು ಗುರುತಿಸಲಾಗಿದೆ. ಈತ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ಬುದ್ಧನಗರದಲ್ಲಿ ವಾಸಿಸುತ್ತಿದ್ದ. 2019ರ ಆಗಸ್ಟ್ 18ರಂದು ನಿಪ್ಪಾಣಿಯಲ್ಲಿ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ. ಈ ಸಂಬಂಧ, ನಿಪ್ಪಾಣಿ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 55/2019ರ ಅಡಿಯಲ್ಲಿ ಐಪಿಸಿ ಸೆಕ್ಷನ್ 376 ಮತ್ತು ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ.

ಸಾಕ್ಷಿಗಳ ಹೇಳಿಕೆಗಳು ಮತ್ತು ಸಂಬಂಧಿತ ಕಾಂಕ್ರೀಟ್ ಸಾಕ್ಷ್ಯಗಳನ್ನು ಸಂಗ್ರಹಿಸಿದ ನಂತರ, ಜಿಲ್ಲಾ ಸೆಷನ್ಸ್ ನ್ಯಾಯಾಧೀಶರಾದ ಸಿ.ಎಂ. ಪುಷ್ಪಲತಾ 2025ರ ಸೆಪ್ಟೆಂಬರ್ 4ರಂದು ತೀರ್ಪು ನೀಡಿದರು. ಅಪರಾಧಿ ವಿರುದ್ಧ ಐಪಿಸಿ ಸೆಕ್ಷನ್ 376 ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, 30 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ಸಂತ್ರಸ್ತೆಗೆ 4 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!