ವಿಜಯಸಾಕ್ಷಿ ಸುದ್ದಿ, ಲಕ್ಷೇಶ್ವರ/ಶಿಗ್ಲಿ: ಪಟ್ಟಣದ ಅಗಡಿ ಇಂಜಿನಿಯರಿಂಗ್ ಕಾಲೇಜಿನ ಕ್ರೀಡಾಂಗಣದಲ್ಲಿ 2025-26ನೇ ಸಾಲಿನ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ನಡೆದ ಲಕ್ಷೇಶ್ವರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ಶಿಗ್ಲಿ ಗ್ರಾಮದ ಪ.ಮ ಬಳಿಗಾರ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ಬಾಲಕರ ವಿಭಾಗದಲ್ಲಿ ಈಶ್ವರ ಹುಲ್ಲೂರ 1500 ಮೀ, 400 ಮೀ ಓಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾನೆ. ವಾಲಿಬಾಲ್ ಮತ್ತು ಕಬಡ್ಡಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಬಾಲಕಿಯರ ವಿಭಾಗದಲ್ಲಿ ಕಾಲೇಜಿನ ವಿದ್ಯಾರ್ಥಿನಿ ಲಕ್ಷ್ಮೀ ಬಾಳಿಕಾಯಿ ಗುಂಡು, ಚಕ್ರ ಮತ್ತು ಸರಪಳಿ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ವಯಕ್ತಿಕ ವೀರಾಗ್ರಣಿಯಾಗುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾಳೆ.
ಸತ್ಯಮ್ಮ ಕುರಿ 100ಮೀ ಅಡೆತಡೆ ಓಟ ಪ್ರಥಮ, ರಂಜಿತಾ ಪಲ್ಲೇದ ಎತ್ತರ ಜಿಗಿತ ಪ್ರಥಮ, ಲಲಿತಾ ವಡ್ಡರ ತ್ರಿವಿಧ ಜಿಗಿತ ಪ್ರಥಮ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಸಿಬಿಸಿ, ಪ್ರಾಚಾರ್ಯರು, ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.



