ಬೆಂಗಳೂರು:- ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾಗಿ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್ ಗೆ ವಾಕಿಂಗ್ ಮಾಡಲು 40 ನಿಮಿಷ ಅವಕಾಶ ನೀಡಲಾಗಿದೆ.
ಬೆಳಗ್ಗೆ ಮತ್ತು ಸಂಜೆ ಬ್ಯಾರಕ್‌ನ ಹೊರಭಾಗದ ಕಾರಿಡಾರ್‌ನಲ್ಲಿ ವಾಕ್ ಮಾಡಲು ಅನುಮತಿ ಸಿಕ್ಕಿದೆ. ಈ ಸಮಯದಲ್ಲಿ ಬೇರೆ ವಿಚಾರಣಾಧೀನಾ ಕೈದಿಗಳು ವಾಕ್ ಮಾಡುವಂತಿಲ್ಲ. ದರ್ಶನ್ ವಾಕ್ ಮುಗಿದ ನಂತರವಷ್ಟೇ ಇತರರು ವಾಕ್ ಮಾಡಬಹುದಾಗಿದೆ. ವಾಕಿಂಗ್ ಸೇರಿದಂತೆ ಸೆಲ್‌ನಲ್ಲಿ ನಡೆಯುವ ಎಲ್ಲಾ ಚಟುವಟಿಕೆಗಳು ಸಿಸಿಟಿವಿಯಲ್ಲಿ ದಾಖಲಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಅದರ ಜೊತೆಗೆ ದರ್ಶನ್ ಸೆಲ್ ಬಳಿ ಕೆಲಸ ಮಾಡುವ ಎಲ್ಲಾ15 ಸಿಬ್ಬಂದಿ ಕಡ್ಡಾಯವಾಗಿ ಬಾಡಿ ವಾರ್ನ್ ಕ್ಯಾಮರಾ ಹಾಕಿಕೊಂಡು ಕೆಲಸ ಮಾಡಲು ಮೇಲಾಧಿಕಾರಿಗಳು ಸೂಚಿಸಿದ್ದಾರೆ.
ಇತ್ತೀಚೆಗೆ ನ್ಯಾಯಾಧೀಶರ ಎದುರು ನನಗೆ ವಿಷ ಕೊಟ್ಟು ಬಿಡಿ. ನನಗೆ ಜೈಲು ಜೀವನ ಸಾಕಾಗಿದೆ. ಬಿಸಿಲು ನೋಡಿ ತಿಂಗಳಾಗಿದೆ ಎಂದು ಜಡ್ಜ್ ಮುಂದೆ ದರ್ಶನ್ ಕಣ್ಣೀರು ಹಾಕಿದ್ದರು.