ಶಿವಮೊಗ್ಗ: ಓಮ್ನಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಮದುವೆಯಾಗಬೇಕಿದ್ದ ಜೋಡಿಯೊಂದು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್ನಲ್ಲಿ ರೇಖಾ (20) ಮತ್ತು ಬಸವನಗೌಡ ದ್ಯಾಮನಗೌಡ್ರ (25) ಮೃತ ದುರ್ದೈವಿಗಳಾಗಿದ್ದು,
ಶಿಕಾರಿಪುರ ತಾಲೂಕಿನ ಮಟ್ಟಿಕೋಟೆ ಗ್ರಾಮದ ರೇಖಾ ಜತೆ ಗಂಗೊಳ್ಳಿ ಗ್ರಾಮದ ಬಸವನಗೌಡ ದ್ಯಾಮನಗೌಡ್ರಗೆ ಆಗಸ್ಟ್ ತಿಂಗಳಿನಲ್ಲಿ ನಿಶ್ಚಿತಾರ್ಥವಾಗಿತ್ತು. ಮಳೆಯ ಕಾರಣಕ್ಕೆ ಮದುವೆಯನ್ನು ಮುಂದೂಡಿದ್ದ 2 ಕುಟುಂಬಸ್ಥರು, ಡಿಸೆಂಬರ್ನಲ್ಲಿ ಇಬ್ಬರ ಮದುವೆಗೆ ದಿನಾಂಕ ನಿಗದಿ ಮಾಡಿದ್ದರು. ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



