ಮಂಡ್ಯ:- ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಎಂಎಲ್‌ಸಿ ಸಿ.ಟಿ ರವಿ ವಿರುದ್ಧ ಸ್ವಯಂಪ್ರೇರಿತ ಕೇಸ್ ದಾಖಲಾಗಿದೆ.
ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟದ ಬಳಿಕ ಸೆಪ್ಟೆಂಬರ್ 10ರ ಬುಧವಾರ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವೇದಿಕೆಯಲ್ಲಿ ಸಿ.ಟಿ.ರವಿ ಭಾಷಣ ಮಾಡಿದ್ದರು. ಭಾಷಣದ ವೇಳೆ ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಮದ್ದೂರು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಮಂಜುನಾಥ್ ಅವರ ದೂರಿನನ್ವಯ ಪ್ರಕರಣ ದಾಖಲಾಗಿದೆ.
ಅನ್ಯ ಸಮುದಾಯಗಳ ಮಧ್ಯೆ ದ್ವೇಷ ಉಂಟುಮಾಡುವ ಮತ್ತು ಸೌಹಾರ್ದತಾ ಭಾವನೆಗಳಿಗೆ ಭಾದಕವಾಗುವಂತೆ, ವೈರತ್ವ, ದ್ವೇಷ ಉಂಟಾಗುವಂತೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಅಡಿ ಪ್ರಕರಣ ದಾಖಲಾಗಿದೆ.



