ಬೀದರ್:- ನಗರದ ಹಲವೆಡೆ ಧಾರಾಕಾರ ಮಳೆ ಆಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.ಜಿಲ್ಲೆಯ ಬೀದರ್, ಔರಾದ್, ಭಾಲ್ಕಿ, ಹುಮ್ನಾಬಾದ್, ಬಸವಕಲ್ಯಾಣ ಸೇರಿದಂತೆ ಜಿಲ್ಲೆಯಾದ್ಯಂತ ಗುಡುಗು, ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದೆ. ರಾತ್ರಿಯಿಡಿ ಸುರಿದ ಮಳೆಯಿಂದಾಗಿ ಇಂದು ಬೆಳಿಗ್ಗೆ ಶಾಲಾ – ಕಾಲೇಜುಗಳಿಗೆ ಹೋಗಲು ವಿದ್ಯಾರ್ಥಿಗಳು ಪರದಾಡುವಂತಾಗಿತ್ತು.
ಇನ್ನೂ ಕಚೇರಿಗೆ ಹೋಗಲು ಕೂಡ ಜನರು ಹೈರಾಣಾಗಿದ್ದರು ಎಂದು ತಿಳಿದು ಬಂದಿದೆ. ಒಟ್ಟಾರೆ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ.



