ಬೆಂಗಳೂರು:-ಸಿಲಿಕಾನ್ ಸಿಟಿ ಬೆಂಗಳೂರಿನ ಹೊಸಕೆರೆಹಳ್ಳಿಯ ಖಾಸಗಿ ಅಪಾರ್ಟ್ಮೆಂಟ್ ಬಳಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಜರುಗಿದೆ.
ಮಧ್ಯವಯಸ್ಸಿನ ಪುರುಷ ಅಂತ ಮಾಹಿತಿ ಲಭ್ಯವಾಗಿದ್ದು, ಮೃತನ ಗುರುತು ಪತ್ತೆಯಾಗಿಲ್ಲ. ಶವ ಕಂಡ ಕೂಡಲೇ ಗಿರಿನಗರ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ಪೊಲೀಸರ ಜೊತೆ ಸೋಕೋ ಟೀಂ ಕೂಡ ಭೇಟಿ ಕೊಟ್ಟು ಪರಿಶೀಲನೆ ಮಾಡಿದೆ.
ಅಪಾರ್ಟ್ಮೆಂಟ್ ಪಕ್ಕದ ನಿರ್ಜನ ಪ್ರದೇಶದಲ್ಲಿ ವ್ಯಕ್ತಿಯ ಶವ ಬಿದ್ದಿತ್ತು. ಕೆಲ ದಿನಗಳಿಂದ ಶವ ಅಲ್ಲೇ ಬಿದ್ದಿದ್ದು, ವಾಸನೆ ಬಂದಾಗ ಅಪಾರ್ಟ್ಮೆಂಟ್ ನಿವಾಸಿಗಳು ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಗಿರಿನಗರ ಪೊಲೀಸರಿಂದ ತನಿಖೆ ಮುಂದುವರಿದಿದೆ.



