HomeKarnataka Newsಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು: ಹಲವಾರು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ!

ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು: ಹಲವಾರು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ!

For Dai;y Updates Join Our whatsapp Group

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆ ಚುರುಕುಗೊಂಡಿದೆ. ಮುಂದಿನ ನಾಲ್ಕೈದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಕರ್ನಾಟಕ ಭಾಗದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದ್ದು,

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿ ಭಾಗದಲ್ಲೂ ಮಳೆಯ ತೀವ್ರತೆ ಕಡಿಮೆಯಾಗದಿರುವ ಹಿನ್ನೆಲೆಯಲ್ಲಿ,

ಗೋಕರ್ಣ, ಸಿದ್ದಾಪುರ, ಕುಮಟಾ ಹಾಗೂ ಹಳಿಯಾಳ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡು, ಉಡುಪಿ, ಉತ್ತರ ಕನ್ನಡ, ಹಾವೇರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ರಾಮನಗರ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img