• About
  • Advertise
  • Privacy & Policy
  • Contact
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
No Result
View All Result
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಜಾತಿಗಣತಿ ಮರು ಸಮೀಕ್ಷೆ: ಸೆ.22ರಿಂದ ಸರ್ವೇ ಆರಂಭ – ಸಿಎಂ ಸಿದ್ದರಾಮಯ್ಯ ಘೋಷಣೆ

Vijaya Sakshi by Vijaya Sakshi
September 12, 2025
in Karnataka News
0
ಕರ್ನಾಟಕ ಬಜೆಟ್ ಮಂಡನೆ ದಿನಾಂಕ ಘೋಷಿಸಿದ ಸಿಎಂ ಸಿದ್ದರಾಮಯ್ಯ!
0
SHARES
0
VIEWS
Share on FacebookShare on Twitter

ಬೆಂಗಳೂರು: ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7 ರವರೆಗೆ 15 ದಿನಗಳ ಕಾಲ ಸಮೀಕ್ಷೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ,

ಸೆಪ್ಟೆಂಬರ್‌ 22ರಿಂದ ಅಕ್ಟೋಬರ್‌ 7ರ ವರೆಗೆ ಮಧುಸೂದನ್ ನಾಯಕ್ ಸಮಿತಿ ನೇತೃತ್ವದಲ್ಲಿ ಸಮೀಕ್ಷೆ ನಡೆಯಲಿದೆ. ಮರು ಸಮೀಕ್ಷೆಗೆ ಸದ್ಯ 420 ಕೋಟಿ ರೂ. ಖರ್ಚಾಗಲಿದ್ದು, ಅಗತ್ಯಬಿದ್ದರೆ ಹೆಚ್ಚಿನ ಅನುದಾನ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದರು.

ಸುದ್ದಿಗೋಷ್ಟಿಯ ಮುಖ್ಯಾಂಶಗಳು

• ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ ನಡೆಯಲಿದೆ.

• 2015ರಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ್ ಅವರು ವರದಿಯನ್ನು ಸಲ್ಲಿಸಿದ್ದರು. ಕಾಂತರಾಜ್ ಅವರು ವರದಿಯನ್ನು ಸಲ್ಲಿಸಿ 10ವರ್ಷ ಆದ ಕಾರಣ ಹೊಸ ಸಮೀಕ್ಷೆಗೆ ತೀರ್ಮಾನ ಮಾಡಿ ಆ ಕಾರ್ಯವನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕೆ ಈಗ ವಹಿಸಲಾಗಿದೆ.

• ಸಮಾಜದಲ್ಲಿ ಅನೇಕ ಜಾತಿಗಳು ಇದ್ದು, ವೈರುಧ್ಯತೆಯಿಂದಾಗಿ ಕೂಡಿದ್ದು, ಅಸಮಾನತೆ ಈಗಲೂ ಇದೆ. ಸಂವಿಧಾನ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸುತ್ತದೆ. ಸಾಮಾಜಿಕ ನ್ಯಾಯವನ್ನು ಎಲ್ಲರಿಗೂ ಒದಗಿಸಬೇಕು ಎಂದು ಸಂವಿಧಾನ ಹೇಳುತ್ತದೆ. ಡಾ.ಅಂಬೇಡ್ಕರ್ ಅವರು ಹೇಳಿದಂತೆ 1950 ಜನವರಿ 26ರಂದು ಜಾರಿಯಾದಾಗ, ನಾವು ವೈರುಧ್ಯತೆಯಿಂದ ಕೂಡಿದ ಸಮಾಜಕ್ಕೆ ಕಾಲಿಡುತ್ತಿದ್ದೇವೆ. ನಮ್ಮ ಸ್ವಾತಂತ್ರ್ಯ ಯಶಸ್ವಿಯಾಗಬೇಕಾದರೆ, ಪ್ರಜಾಪ್ರಭುತ್ವ ಉಳಿಯಬೇಕಾದರೆ ನಾವು ಅಸಮಾನತೆಯನ್ನು ತೊಲಗಿಸಲೇ ಬೇಕು ಎಂದು ಹೇಳಿದ್ದರು.

• ಸ್ವಾತಂತ್ರ್ಯ ದೊರೆತು ಇಷ್ಟು ವರ್ಷಗಳಾದರೂ ಅಸಮಾನತೆಯನ್ನು ಸಂಪೂರ್ಣವಾಗಿ ತೊಲಗಿಸಲು ನಮಗೆ ಸಾಧ್ಯವಾಗಿಲ್ಲ. ಸಮಾನತೆಯನ್ನು , ಸಮಾನ ಅವಕಾಶ ಒದಗಿಸುವ ನಿಟ್ಟಿನಲ್ಲಿ ನಾವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ಕೈಗೊಂಡಿದ್ದೇವೆ. ರಾಜ್ಯದಲ್ಲಿ ಸುಮಾರು 7ಕೋಟಿ ಜನಸಂಖ್ಯೆಯಿದ್ದು, ಸುಮಾರು 2ಕೋಟಿಯಷ್ಟು ಕುಟುಂಬಗಳಿವೆ. ಇವರೆಲ್ಲರಿಗೂ ಸಮಾನ ಅವಕಾಶ ಒದಗಿಸುವುದು ನಮ್ಮ ಕರ್ತವ್ಯ.

• ಪ್ರತಿಯೊಬ್ಬರ ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಆರ್ಥಿಕ ಸ್ಥಿತಿಗತಿ ಗೊತ್ತಾದರೆ ಮಾತ್ರ ಕಲ್ಯಾಣ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನ ಸಾಧ್ಯವಿದೆ. ದತ್ತಾಂಶ ಸರಿಯಾಗಿ ಗೊತ್ತಾದರೆ ಮಾತ್ರ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ ಸಾಧ್ಯ.

• ಗ್ಯಾರಂಟಿ ಯೋಜನೆಗಳ ಮೂಲಕ ಅಸಮಾನತೆಯನ್ನು ಸ್ವಲ್ಪಮಟ್ಟಿಗೆ ಕಡಿಮೆ ಮಾಡಲು ಪ್ರಯತ್ನ ಮಾಡಿದ್ದೇವೆ. ನಾವು ಹಿಂದೆ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಭಾಗ್ಯ ಯೋಜನೆಗಳ ಮೂಲಕ ಸಹ ಇದನ್ನು ಸಾಧಿಸಲು ಪ್ರಯತ್ನಿಸಿದ್ದೇವೆ.

• ಹಿಂದುಳಿದವರ ಬಡತನ, ನಿರುದ್ಯೋಗ, ಅನಕ್ಷರತೆ ಹೋಗಬೇಕಾದರೆ ವಿಶೇಷ ಪ್ರಯತ್ನದ ಅಗತ್ಯವಿದೆ ಎಂಬುವುದನ್ನು ನಾವು ತಿಳಿದಿದ್ದೇವೆ.

• ಈ ಹಿನ್ನೆಲೆಯಲ್ಲಿ 7ಕೋಟಿ ಜನರ ಸಾಮಾಜಿಕ ಶೈಕ್ಷಣಿಕ ಪರಿಸ್ಥಿತಿಯನ್ನು ತಿಳಿದುಕೊಳ್ಳುವ ಉದ್ದೇಶದಿಂದ ಮಧುಸೂಧನ ನಾಯ್ಕ್ ಅವರ ಅಧ್ಯಕ್ಷತೆಯಲ್ಲಿ ಆಯೋಗ ಸಮೀಕ್ಷೆ ಕಾರ್ಯ ಕೈಗೊಳ್ಳಲಿದೆ.

• ಆದಷ್ಟು ಎಚ್ಚರಿಕೆಯಿಂದ, ಪ್ರತಿಯೊಬ್ಬರನ್ನೂ ಒಳಗೊಂಡಂತೆ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ಡಿಸೆಂಬರ್ ಒಳಗಾಗಿ ವರದಿಯನ್ನು ಸಲ್ಲಿಸಲು ಸೂಚಿಸಲಾಗಿದೆ. ದಸರಾ ರಜೆ ಅವಧಿಯಲ್ಲಿ ಶಿಕ್ಷಕರ ಸೇವೆಯನ್ನು ಬಳಸಿಕೊಂಡು ಸಮೀಕ್ಷೆ ಕಾರ್ಯ 1.75 ಲಕ್ಷ ಶಿಕ್ಷಕರನ್ನು ಈ ಕಾರ್ಯಕ್ಕೆ ಬಳಸಲಾಗುವುದು. ಅವರಿಗೆ ರೂ.20ಸಾವಿರವರೆಗೆ ಗೌರವ ಸಂಭಾವನೆ ನೀಡಲಾಗುವುದು. ಶಿಕ್ಷಕರ ಸಂಭಾವನೆಗೆ ರೂ. 325 ಕೋಟಿ ವೆಚ್ಚವಾಗಲಿದೆ.

• ತಾತ್ಕಾಲಿಕವಾಗಿ ರೂ.420ಕೋಟಿ ಸಮೀಕ್ಷೆ ಕಾರ್ಯಕ್ಕೆ ನಿಗದಿಪಡಿಸಲಾಗಿದೆ. ಅಗತ್ಯ ಬಿದ್ದರೆ ಹೆಚ್ಚುವರಿ ಅನುದಾನ ಒದಗಿಸಲಾಗುವುದು.

• ಆಯೋಗ ವೈಜ್ಞಾನಿಕವಾಗಿ, ಯಾವುದೇ ಲೋಪವಾಗದಂತೆ ಸಮೀಕ್ಷೆ ಕಾರ್ಯ ನಡೆಸಬೇಕು. ನಿಗದಿತ ಅವಧಿಯ ಒಳಗಾಗಿ ಸಮೀಕ್ಷೆ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಬೇಕು.

• ನಾಗಮೋಹನ ದಾಸ್ ಅವರು ಒಳಮೀಸಲಾತಿ ಸಮೀಕ್ಷೆಗೆ ವಿಶೇಷ ತಂತ್ರಜ್ಞಾನ ಬಳಸಿಕೊಂಡ ರೀತಿಯಲ್ಲಿ ಈ ಸಮೀಕ್ಷೆಯನ್ನು ಸಹ ಕೈಗೊಳ್ಳಲಾಗುವುದು. ಪ್ರತಿಯೊಂದು ಮನೆಯ ವಿದ್ಯುತ್ ಮೀಟರ್ ಆಧಾರದಲ್ಲಿ ಮನೆಯ ಜಿಯೋ ಟ್ಯಾಗ್ ಮಾಡಿ UHID ವಿಶೇಷ ಸಂಖ್ಯೆಯನ್ನು ನಮೂದಿಸಲಾಗುವುದು. ಈಗಾಗಲೇ 1.55 ಲಕ್ಷ ಮನೆಗಳಿಗೆ ಸಂಖ್ಯೆಯನ್ನು ಅಳವಡಿಸಲಾಗಿದೆ. ವಿದ್ಯುತ್ ಸಂಪರ್ಕ ಇಲ್ಲದ ಮನೆಗಳ ಸಮೀಕ್ಷೆಯನ್ನು ಸಹ ಮಾಡಲಾಗುವುದು.

• ಸಮೀಕ್ಷೆ ಸಂದರ್ಭದಲ್ಲಿ ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ನ್ನು ಮೊಬೈಲ್ ಸಂಖ್ಯೆಗೆ ಲಿಂಕ್ ಮಾಡುವ ಕಾರ್ಯವನ್ನು ಮಾಡಲಾಗುವುದು.

• ಸಮೀಕ್ಷೆ ಕಾರ್ಯದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು. ಯಾರೂ ಕೂಡಾ ಸಮೀಕ್ಷೆಯಿಂದ ಹೊರಗುಳಿಯಬಾರದು. ಸಮೀಕ್ಷೆಯಲ್ಲಿ 60 ಪ್ರಶ್ನೆಗಳನ್ನು ಕೇಳಲಾಗುವುದು. ಎಲ್ಲರೂ ಪ್ರತಿಯೊಂದು ಪ್ರಶ್ನೆಗಳಿಗೆ ಸಮರ್ಪಕವಾದ ಮಾಹಿತಿಯನ್ನು ಒದಗಿಸಬೇಕು. ಸರಿಯಾದ ಮಾಹಿತಿ ನೀಡಿದರೆ ಮಾತ್ರ ವೈಜ್ಞಾನಿಕ ಸಮೀಕ್ಷೆ ಸಾಧ್ಯವಿದೆ.

• ಆಯೋಗದ ಸಹಾಯವಾಣಿ ಸಂಖ್ಯೆ 8050770004 ಗೆ ಕರೆ ಮಾಡಿ ಸಾರ್ವಜನಿಕರು ಸಮೀಕ್ಷೆ ಕುರಿತು ಯಾವುದೇ ದೂರು ಅಥವಾ ಮಾಹಿತಿಯನ್ನು ಪಡೆಯಬಹುದು. ಆನ್ಲೈನ್ ಮೂಲಕ ಸಹ ಸಮೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

• ಸಮೀಕ್ಷೆ ಆರಂಭವಾಗುವ ಪೂರ್ವದಲ್ಲೇ ಆಶಾ ಕಾರ್ಯಕರ್ತರು ಎಲ್ಲರ ಮನೆಗಳಿಗೆ ಹೋಗಿ ಸಮೀಕ್ಷೆಯ ನಮೂನೆಯನ್ನು ಒದಗಿಸಲಿದ್ದಾರೆ. ಇದರಿಂದ ಸರಿಯಾದ ಮಾಹಿತಯನ್ನು ಒದಗಿಸುವ ಬಗ್ಗೆ ಜಾಗೃತಿ ಮೂಡಲು ಸಾಧ್ಯವಿದೆ. ಪ್ರತಿ ಶಿಕ್ಷಕರಿಗೆ 120ರಿಂದ 150ಮನೆಗಳ ವ್ಯಾಪ್ತಿಯನ್ನು ನಿಗದಿಪಡಿಸಲಾಗಿದೆ ಎಂದು ಹೇಳಿದರು

Tags: BreakingNewsCaste Census ReportKannadaLatestNewsKarnatakasiddaramaihVijayasakshivijayasakshinews
Previous Post

ಡಿಕೆ ಶಿವಕುಮಾರ್ ನಿವಾಸದ ಬಳಿ ನಕಲಿ ನಂಬರ್ ಪ್ಲೇಟ್ ಕಾರು ಪತ್ತೆ! ಫಾರ್ಚೂನರ್ ವಶಕ್ಕೆ

Next Post

ವಿಷಪೂರಿತ ಆಹಾರ ಸೇವಿಸಿದ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ : ಆಸ್ಪತ್ರೆಗೆ ದಾಖಲು

Vijaya Sakshi

Vijaya Sakshi

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ವಿಷಪೂರಿತ ಆಹಾರ ಸೇವಿಸಿದ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ : ಆಸ್ಪತ್ರೆಗೆ ದಾಖಲು

ವಿಷಪೂರಿತ ಆಹಾರ ಸೇವಿಸಿದ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ : ಆಸ್ಪತ್ರೆಗೆ ದಾಖಲು

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

October 21, 2026

ಸೊಲ್ಲಾಪುರದಿಂದ ಗಾಂಜಾ ಪೂರೈಕೆ, ಗದಗದಲ್ಲಿ ಮಾರಾಟ: ಗಂಗಿಮಡಿಯ ಇಬ್ಬರು ಸೇರಿ ನಾಲ್ವರ ಬಂಧನ

October 18, 2026

ದಸರಾ ಹಬ್ಬದ ದಿನವೇ ಖಾಸಗಿ ಶಾಲಾ ಶಿಕ್ಷಕಿ ಸಾವು! ತುಂಗಭದ್ರಾ ಹಿನ್ನೀರಿನಲ್ಲಿ ಮೃತದೇಹ ಪತ್ತೆ

October 20, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

October 21, 2026
ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

October 21, 2026
ದಸರಾ ರಜೆ ಮುಗಿಸಿ ಬೆಂಗಳೂರಿಗೆ ವಾಪಸ್: ನೆಲಮಂಗಲ ಬೈಪಾಸ್‌ನಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್!

ದಸರಾ ರಜೆ ಮುಗಿಸಿ ಬೆಂಗಳೂರಿಗೆ ವಾಪಸ್: ನೆಲಮಂಗಲ ಬೈಪಾಸ್‌ನಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್!

October 21, 2026
ದಸರಾ ರಜೆ ವಿಸ್ತರಣೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಣೆ!

ದಸರಾ ರಜೆ ವಿಸ್ತರಣೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಣೆ!

October 21, 2026

Recent News

Vijaya Sakshi News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

October 21, 2026
ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

October 21, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper