ಬೆಂಗಳೂರು:– ಲಂಚ ಪಡೆಯುತ್ತಿದ್ದ ಕಾರ್ಮಿಕ ಅಧಿಕಾರಿ ಲೋಕಾ ಬಲೆಗೆ ಬಿದ್ದಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜರುಗಿದೆ.
Advertisement
ಶ್ಯಾಮ್ ರಾವ್ ಲೋಕಾ ಬಲೆಗೆ ಬಿದ್ದ ಅಧಿಕಾರಿ. 10 ಸಾವಿರ ಲಂಚ ಪಡೆಯುತ್ತಿದ್ದಾಗ ಕಾರ್ಮಿಕ ಅಧಿಕಾರಿ ಶ್ಯಾಮ್ ರಾವ್ ಲೋಕಾ ಬಲೆಗೆ ಬಿದ್ದಿದ್ದಾರೆ. ಕಾರ್ಮಿಕರ ಪರವಾನಗಿ ನೀಡಲು 10 ಸಾವಿರ ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ಅದರಂತೆ ಮುಂಗಡವಾಗಿ 5 ಸಾವಿರ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಕಾರ್ಮಿಕ ಇಲಾಖೆಯ ಉಪವಿಭಾಗ 5 ರ ಅಧಿಕಾರಿ ಈ ಭ್ರಷ್ಟ ಶ್ಯಾಮ್ ರಾವ್ ಎನ್ನಲಾಗಿದೆ. ಬಾಗಲಗುಂಟೆಯ ಮಂಜುನಾಥನಗರದ ಕಚೇರಿಯಲ್ಲಿ ಸಿಕ್ಕಿ ಬಿದ್ದಿದ್ದಾರೆ.