ಚಿಕ್ಕಬಳ್ಳಾಪುರ:- ಜಿಲ್ಲೆಯ ಗುಡಿಬಂಡೆ ಪಟ್ಟಣದ ವಾರ್ಡ್ ನಂಬರ್ 8ರಲ್ಲಿ ಮದ್ಯಕ್ಕಾಗಿ ಪೀಡಿಸಿದ ಪ್ರಿಯತಮೆಯನ್ನ ಪ್ರಿಯಕರ ಮಚ್ಚಿನಿಂದ ಮನಸ್ಸೋ ಇಚ್ಛೆ ಕೊಚ್ಚಿ ಕೊಲೆ ಮಾಡಿರುವ ಘಟನೆ ಜರುಗಿದೆ.
25 ವರ್ಷದ ರಮಿಜಾಬಿ ಮೃತ ಪ್ರಿಯತಮೆ. 40 ವರ್ಷದ ಬಾಬಾಜಾನ್ ಕೊಲೆ ಮಾಡಿದ ಪ್ರಿಯಕರ. ಮೂಲತಃ ಶ್ರೀನಿವಾಸಪುರದ ರಮಿಜಾಬಿಗೆ ಬೇರೊಬ್ಬರ ಜೊತೆ ವಿವಾಹವಾಗಿ ಮಕ್ಕಳಿದ್ದರು. ಇತ್ತ ಬಾಬಾಜಾನ್‌ಗೂ ಮದುವೆಯಾಗಿ ಮಕ್ಕಳಿದ್ದರು. ಆದರೂ ಇಬ್ಬರೂ, ಗಂಡ, ಹೆಂಡತಿ ಮತ್ತು ಮಕ್ಕಳನ್ನ ಬಿಟ್ಟು ಲಿವಿಂಗ್ ರಿಲೇಶನ್‌ಶಿಪ್‌ನಲ್ಲಿದ್ದರು. ಇಬ್ಬರು ಸಹ ಕುಡಿತದ ಚಟಕ್ಕೆ ಬಿದ್ದಿದ್ದರು. ಪದೇ ಪದೇ ಕುಡಿದು ಗಲಾಟೆ ಮಾಡಿಕೊಳ್ಳುತ್ತಿದ್ದರು ಎನ್ನಲಾಗಿದೆ.
ಶುಕ್ರವಾರ ಸಂಜೆ ಸಹ ಕುಡಿದು ಗಲಾಟೆ ಮಾಡಿಕೊಂಡಿದ್ದು, ರಮಿಜಾಬಿ ತನಗೆ ಮತ್ತಷ್ಟು ಎಣ್ಣೆ ಬೇಕೆಂದು ಪೀಡಿಸಿದ್ದಳಂತೆ. ಇದರಿಂದ ಸಿಟ್ಟಿಗೆದ್ದ ಬಾಬಾಜಾನ್ ಮಚ್ಚಿನಿಂದ ಮನಸ್ಸೋಇಚ್ಛೆ ಕೊಚ್ಚಿ ಕೊಂದಿದ್ದಾನೆ. ಘಟನಾ ಸ್ಥಳಕ್ಕೆ ಗುಡಿಬಂಡೆ ಪೊಲೀಸರು ಹಾಗೂ ಎಸ್ಪಿ ಕುಶಲ್ ಚೌಕ್ಸಿ ಭೇಟಿ ನೀಡಿ, ಬಾಬಾಜಾನ್‌ನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.