ಕಠ್ಮಂಡು: ನೇಪಾಳದ ಮಧ್ಯಂತರ ಪ್ರಧಾನಿಯಾಗಿ ಸುಶೀಲಾ ಕರ್ಕಿ ಅವರು ಇಂದು (ಶುಕ್ರವಾರ) ರಾತ್ರಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
Advertisement
ಅಧ್ಯಕ್ಷ ರಾಮಚಂದ್ರ ಪೌಡೆಲ್ ಅವರು ಕರ್ಕಿ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಸುಶೀಲಾ ಕರ್ಕಿ ಅವರ ಮಧ್ಯಂತರ ಸಂಪುಟದಲ್ಲಿ ಯಾವುದೇ ಸಚಿವರನ್ನು ಸೇರಿಸಿಕೊಳ್ಳಲಾಗಿಲ್ಲ.
ಅಧ್ಯಕ್ಷ ರಾಮ್ ಚಂದ್ರ ಪೌಡೆಲ್, ನೇಪಾಳ ಸೇನಾ ಮುಖ್ಯಸ್ಥ ಜನರಲ್ ಅಶೋಕ್ ರಾಜ್ ಸಿಗ್ಡೆಲ್ ಮತ್ತು ವಾರದ ಆರಂಭದಲ್ಲಿ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಒಲಿ ಅವರ ರಾಜೀನಾಮೆಗೆ ಕಾರಣವಾದ ಜನರೇಷನ್ ಝಡ್ ಪ್ರತಿಭಟನಾ ಚಳವಳಿಯ ಪ್ರತಿನಿಧಿಗಳ ನಡುವಿನ ಒಮ್ಮತದ ನಂತರ ಪ್ರಧಾನಿ ಸ್ಥಾನಕ್ಕೆ ಕರ್ಕಿ ಅವರ ಹೆಸರನ್ನು ಅಂತಿಮಗೊಳಿಸಲಾಗಿತ್ತು. ಅದರಂತೆ ಶುಕ್ರವಾರ ರಾತ್ರಿ ಕರ್ಕಿ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.