ಮೈಸೂರು: ಸರ್ಕಾರ ಸತ್ತವರ ಕುಟುಂಬದವರಿಗೆ ಪರಿಹಾರ ನೀಡುವುದು ಸಾವಿಗೆ ಸಮಾನ ಎಂದಲ್ಲ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಹಾಸನದಲ್ಲಿ ರಸ್ತೆ ಅಪಘಾತದಲ್ಲಿ ಮಾಡಿದವರ ಕುಟುಂಬದವರಿಗೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದು ಬಿಜೆಪಿ ಅದನ್ನು 10 ಲಕ್ಷಕ್ಕೆ ಏರಿಸಬೇಕೆಂದು ಹೇಳಿರುವ ಬಗ್ಗೆ ಮುಖ್ಯಮಂತ್ರಿಗಳು ಮೇಲಿನಂತೆ ಪ್ರತಿಕ್ರಿಯೆ ನೀಡಿದರು.
ಸರ್ಕಾರ ರಸ್ತೆ ಸುರಕ್ಷತಾ ಕಾನೂನು ಜಾರಿ ಮಾಡಿದ್ದು, ಸುರಕ್ಷತಾ ಕ್ರಮಗಳನ್ನು ಗಳನ್ನು ಕೈಗೊಂಡಿದೆ. ಚಾಲಕರ ತಪ್ಪಿನಿಂದ ಅಪಘಾತವಾಗಿದೆ. ಅದಕ್ಕೆ ಸರ್ಕಾರ ಹೇಗೆ ಹೊಣೆಯಾಗಲು ಸಾಧ್ಯ? ಎಂದರು. ಮೃತರ ಕುಟುಂಬದವರಿಗೆ ಸಾವಿನ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು ಹಾಸನ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಅವರಿಗೆ ಮೃತರ ಸಂಬಂಧಿಕರನ್ನು ಭೇಟಿ ಮಾಡಿ ಪರಿಹಾರ ಘೋಷಣೆ ಮಾಡುವಂತೆ ಸೂಚಿಸಿದ್ದೇನೆ ಎಂದರು.
ಆರ್ಥಿಕವಾಗಿ ಹಿಂದುಳಿದಿದ್ದಾರೆ ಎಂದೇ ಪರಿಹಾರ ನೀಡಿದೆ
ಸತ್ತವರು ಹೆಚ್ಚಾಗಿ ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳಿದ್ದರು ಹಾಗಾಗಿ ಸರ್ಕಾರ ಹೆಚ್ಚಿನ ಪರಿಹಾರ ಒದಗಿಸುತ್ತಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಸರ್ಕಾರ ಐದು ಲಕ್ಷ ಪರಿಹಾರ ನೀಡಿದೆ. ಮೃತರ ಕುಟುಂಬದವರು ಆರ್ಥಿಕವಾಗಿ ಹಿಂದುಳಿದಿದ್ದಾರೆ ಎಂದೇ ಪರಿಹಾರ ನೀಡಿದೆ ಎಂದರು.
ವಿರೋಧಪಕ್ಷದವರ ಒತ್ತಡದಿಂದ ಪ್ರಧಾನಿಗಳು ಮಣಿಪುರಕ್ಕೆ ಭೇಟಿ ನೀಡುತ್ತಿದ್ದಾರೆ
ಮೂರು ವರ್ಷಗಳ ನಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಣಿಪುರಕ್ಕೆ ಭೇಟಿ ನೀಡುತ್ತಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿ, ಗಲಾಟೆ ಆಗುವಾಗ ಭೇಟಿ ನೀಡದೇ, ಪರಿಸ್ಥಿತಿ ಸುಧಾರಿಸಿದ ಮೇಲೆ ಭೇಟಿ ನೀಡುತ್ತಿದ್ದಾರೆ. ಇಷ್ಟು ವರ್ಷ ಆಯ್ಕೆ ಹೋಗಲಿಲ್ಲ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ವಿರೋಧಪಕ್ಷದವರ ಒತ್ತಡದಿಂದ ಈಗ ಭೇಟಿ ನೀಡುತ್ತಿದ್ದಾರೆ ಎಂದರು.