ಬೆಂಗಳೂರು:– ಭೀಕರ ಸರಣಿ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ನಗರದ ಸುಮ್ಮನಹಳ್ಳಿ ಜಂಕ್ಷನ್ ರಸ್ತೆಯಲ್ಲಿ ಜರುಗಿದೆ.
Advertisement
ಟ್ರಕ್, ಕಾರು ಹಾಗೂ ಆಟೋ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಈ ದುರಂತ ಸಂಭವಿಸಿದೆ. ಯೇಸು.ಡಿ ಮತ್ತು ಜೆನ್ನಿಫರ್ ಮೃತರು. ಇವರಿಬ್ಬರು ಆಟೋದಲ್ಲಿದ್ದರು ಎಂದು ತಿಳಿದುಬಂದಿದೆ. ಅಡ್ಡದಾರಿಯಿಂದ ಬಂದ ಟ್ರಕ್ ಸುಮ್ಮನಹಳ್ಳಿ ರಸ್ತೆಗೆ ಇಳಿದಾಗ ಬ್ರೇಕ್ ಫೇಲ್ ಆಗಿ ಮುಂದೆ ಇದ್ದ ಆಟೋ ಮತ್ತು ಕಾರಿಗೆ ಡಿಕ್ಕಿಯಾಗಿದೆ. ಇದರಿಂದ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಆಟೋ ಎರಡು ತುಂಡಾಗಿದೆ. ಮೃತರಲ್ಲಿ ಇನ್ನೋರ್ವನ ಗುರುತು ಪತ್ತೆಯಾಗಿಲ್ಲ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಮತ್ತಿಬ್ಬರು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅಪಘಾತ ನಡೆದ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.