ಕೋಲಾರ:- ಜಿಲ್ಲೆಯ ಮಾಲೂರು ತಾಲ್ಲೂಕು ಕ್ಷೇತ್ರನಹಳ್ಳಿ ಗ್ರಾಮದಲ್ಲಿ ಶಾಲೆಗೆ ಬಾರದ ವಿದ್ಯಾರ್ಥಿಯನ್ನು ಪ್ರಶ್ನಿಸಿದ ಶಿಕ್ಷಕಿ ಮೇಲೆ ವಿದ್ಯಾರ್ಥಿಯ ತಂದೆ ಹಲ್ಲೆ ನಡೆಸಿದ ಘಟನೆ ಜರುಗಿದೆ.
Advertisement
ಕ್ಷೇತ್ರನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಮಂಜುಳ ಹಲ್ಲೆಗೊಳಗಾದ ಶಿಕ್ಷಕಿ. ಗ್ರಾಮದ ವಿದ್ಯಾರ್ಥಿ ತಂದೆ ಚೌಡಪ್ಪ ಎಂಬಾತನಿಂದ ಹಲ್ಲೆ ನಡೆದಿದೆ. ಚೌಡಪ್ಪ ಪುತ್ರ ಚರಣ್ ಎಂಬ ವಿದ್ಯಾರ್ಥಿ ಎರಡು ದಿನ ಶಾಲೆಗೆ ಬಾರದ್ದನ್ನು ಶಿಕ್ಷಕಿ ಪ್ರಶ್ನೆ ಮಾಡಿದ್ದರು. ಇದಕ್ಕೆ ಕೋಪಗೊಂಡಿದ್ದ ವಿದ್ಯಾರ್ಥಿ ಚರಣ್ ತಂದೆ ಚೌಡಪ್ಪ ಶಾಲೆಗೆ ಬಂದು ಏಕಾಏಕಿ ಹಲ್ಲೆ ಮಾಡಿದ್ದಾರೆ. ಇದೀಗ ಮಂಜುಳ ಮಾಲೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆ ಬಳಿಕ ಚೌಡಪ್ಪ ಹಾಗೂ ಆತನ ಕುಟುಂಬ ಗ್ರಾಮದಿಂದ ನಾಪತ್ತೆಯಾಗಿದೆ. ಸ್ಥಳಕ್ಕೆ ಮಾಸ್ತಿ ಪೊಲೀಸರು ಬೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.