ಚಿತ್ರದುರ್ಗ: ಗಣೇಶ ವಿಸರ್ಜನೆ ಸಂಭ್ರಮದಲ್ಲಿದ್ದವರ ಮೇಲೆ ರಕ್ಕಸನಂತೆ ನುಗ್ಗಿದ್ದ ಟ್ರಕ್ ವಿದ್ಯಾರ್ಥಿಗಳು ಸೇರಿ 9 ಜನರನ್ನು ಬಲಿ ಪಡೆದಿದೆ. ಈ ಘೋರ ದುರಂತದಲ್ಲಿ ಮೃತಪಟ್ಟವರಲ್ಲಿ ಯುವಕರೇ ಹೆಚ್ಚು. ಮನೆಗೆ ಆಧಾರವಾಗಬೇಕಿದ್ದ ಯುವಕರ ಭೀಕರ ಅಂತ್ಯವಾಗಿದೆ.
ಇನ್ನೂ ಈ ಅಪಘಾತದಲ್ಲಿ ಹುಟ್ಟುಹಬ್ಬದ ದಿನವೇ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಗವಿಗಂಗಾಪುರ ಗ್ರಾಮದ 22 ವರ್ಷ ವಯಸ್ಸಿನ ಮಿಥುನ್ ತನ್ನ ಬರ್ತ್ ಡೇ ದಿನವೇ ಸಾವನ್ನಪ್ಪಿದ್ದಾನೆ.
ಈ ದುರಂತದಲ್ಲಿ ಈವರೆಗೆ 9 ಜನರು ಸಾವನ್ನಪ್ಪಿದ್ದು, ಮೃತರಲ್ಲಿ ಯುವಕರೇ ಹೆಚ್ಚಿದ್ದಾರೆ. 20 ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೂ ಈ ದುರಂತಕ್ಕೆ ಸಿಎಂ ಸಿದ್ದರಾಮಯ್ಯ ಆಘಾತ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಹೃದಯವಿದ್ರಾವಕ ಘಟನೆ ಮನಸ್ಸಿಗೆ ತೀವ್ರ ನೋವುಂಟು ಮಾಡಿದೆ ಅಂತಾ ಮರುಕ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳಿದ್ದಾರೆ.


