ಧಾರವಾಡ: ಧಾರವಾಡ ಕೃಷಿ ಮೇಳದಲ್ಲಿ ದುರಂತ ಸಂಭವಿಸಿದ್ದು, ಟ್ರ್ಯಾಕ್ಟರ್ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾರೆ. ಪರಶುರಾಮ ಎಂ. (32) ಮೃತ ವ್ಯಕ್ತಿ.
ಎಸ್, ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಕೃಷಿ ಮೇಳ ನಡೆಯಲಿದೆ. ಮೊದಲ ದಿನವಾದ ಶನಿವಾರ ಬೆಳ್ಳಂಬೆಳಿಗ್ಗೆ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲೇ ದುರಂತವೊಂದು ನಡೆದಿದೆ.
ಕೃಷಿ ಮೇಳದಲ್ಲಿ ಪ್ರದರ್ಶನಕ್ಕೆಂದು ತರಲಾಗಿದ್ದ ಮಿನಿ ಟ್ರ್ಯಾಕ್ಟರ್ ಓರ್ವ ವ್ಯಕ್ತಿಯ ಮೇಲೆ ಬಿದ್ದು ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕೃಷಿ ಮೇಳದಲ್ಲಿ ಪ್ರದರ್ಶನಕ್ಕೆಂದು ಕ್ಯಾಂಟರ್ ವಾಹನದ ಮೂಲಕ ಮಿನಿ ಟ್ರ್ಯಾಕ್ಟರ್ ತರಲಾಗಿತ್ತು.
ಆ ಟ್ರ್ಯಾಕ್ಟರ್‌ನ್ನು ಕ್ಯಾಂಟರ್‌ನಿಂದ ಕೆಳಗಿಳಿಸುವ ಸಂದರ್ಭದಲ್ಲಿ ವ್ಯಕ್ತಿಯ ಮೇಲೆ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಆ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



