ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಅತಿವೃಷ್ಟಿಯಿಂದ ಲಕ್ಷಾಂತರ ಹೆಕ್ಟರ್ ಪ್ರದೇಶದಲ್ಲಿ ರೈತರ ಬೆಳೆ ನಷ್ಟವಾಗಿದ್ದು ನಾಳೆಯಿಂದ ನಿಖಿಲ್ ಕುಮಾರಸ್ವಾಮಿ ಅವರು ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲು ಪ್ರವಾಸ ಮಾಡಲಿದ್ದಾರೆ.
ಮೊದಲಿಗೆ ಕಲಬುರಗಿಯ ಎಪಿಎಂಸಿ ಮಾರುಕಟ್ಟೆಯಲ್ಲಿ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ. ನಂತರ ಕಲಬುರಗಿ ಜಿಲ್ಲೆಯ ಸೋಮನಾಥಹಳ್ಳಿ.ಗ್ರಾಮದಲ್ಲಿ ಅತಿವೃಷ್ಟಿಯಿಂದ ಹಾನಿಗೊಳದ ಪ್ರದೇಶಗಳಿಗೆ ಭೇಟಿ ನೀಡಿ ನೆರೆ ಸಂತ್ರಸ್ತರ ಸಮಸ್ಯೆಗಳನ್ನ ಆಲಿಸಿದ್ದಾರೆ.
ನಂತರ ಅಲ್ಲಿಂದ ಜೇವರ್ಗಿ ತಾಲ್ಲೂಕಿನ ಕಟ್ಟಿಸಂಗವಿ, ಜೇವರ್ಗಿ ನಗರ, ಅವರಾದ, ಗಂವ್ಹಾರ ಗ್ರಾಮದಲ್ಲಿ ಅತಿವೃಷ್ಟಿಯಿಂದ ಹಾನಿಗೊಳದ ಪ್ರದೇಶಗಳಿಗೆ ಭೇಟಿ ಅಲ್ಲಿನ ಸ್ಥಳೀಯ ರೈತರ ಸಮಸ್ಯೆಗಳನ್ನ ಆಲಿಸಿ ಸಂಜೆ ಕಲಬುರಗಿಯ ಹೋಟೆಲ್ ಹೆರಿಟೇಜ್ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.
ಬೀದರ್ ಜಿಲ್ಲೆ ಮಳೆ ಹಾನಿ ಪ್ರದೇಶಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ
ಸೆ. 16 ರಂದು ಬೀದರ್ ಜಿಲ್ಲೆಯ ಮಳೆ ಹಾನಿ ಪ್ರದೇಶಕ್ಕೆ ನಿಖಿಲ್ ಕುಮಾರಸ್ವಾಮಿ ಅವರು ಭೇಟಿ ನೀಡಲಿದ್ದಾರೆ. ಬೀದರ್ ಜಿಲ್ಲೆಯ ಮರಕಲ, ಅಲಿಯಂಬರ್, ಇಸ್ಲಾಂಪುರ, ಜಾಂಪಾಡ್, ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ನೆರೆ ಸಂತ್ರಸ್ತರ ಸಮಸ್ಯೆಗಳನ್ನ ಆಲಿಸಲಿದ್ದಾರೆ.
ನಂತರ ಅಲ್ಲಿಂದ ಬೀದರ್ ಜಿಲ್ಲೆಯ ಕಾಶಂಪೂರ್ ಗೆ ಭೇಟಿ ನೀಡಿ ಕಾಶಂಪೂರ್, ಬುಧೇರಾ, ಕಮಠಾಣ, ಮರ್ಜಾಪುರ ಮನೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ನೆರೆ ಸಂತ್ರಸ್ತರ ಸಮಸ್ಯೆಗಳನ್ನ ಆಲಿಸಿ ಅಲ್ಲಿ ಸುದ್ದಿಗೋಷ್ಠಿ ನಡೆಸಿ ಬೀದರ್ ಜಿಲ್ಲೆಯ ಮಳೆಹಾನಿ ಪ್ರದೇಶದ ಸಂಪೂರ್ಣ ಮಾಹಿತಿ ಯನ್ನು ಮಾಧ್ಯಮಗಳ ಜತೆ ನಿಖಿಲ್ ಕುಮಾರಸ್ವಾಮಿ ಅವರು ವಿವರಿಸಲಿದ್ದಾರೆ.
ರೈತರ ಸಾಲ ಮನ್ನಕ್ಕೆ ನಿಖಿಲ್ ಕುಮಾರಸ್ವಾಮಿ ಒತ್ತಾಯ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳೆ ನಷ್ಟದಿಂದ ರೈತರು ಕಣ್ಣೀರಿಡುತ್ತಿದ್ದಾರೆ. ಇಂತಹ ಸಂಕಷ್ಟದ ಸಮಯದಲ್ಲಿ ನೆರವಿಗೆ ಧಾವಿಸದೇ ಉಸ್ತುವಾರಿ ಮಂತ್ರಿಗಳು ಇಡೀ ಸರ್ಕಾರ ಕಾಣೆಯಾಗಿದೆ. ಜಿಲ್ಲೆಗಳಿಗೆ ತೆರಳಿ ನಿರಾಶ್ರಿತರಿಗೆ ಪರಿಹಾರ ಕಲ್ಪಿಸಿ ಎಂದು ನಿಖಿಲ್ ಅವರು ಸರ್ಕಾರಕ್ಕೆ ಒತ್ತಾಹಿಸಲಿದ್ದಾರೆ.
ಇನ್ನು ಕಲ್ಯಾಣ ಕರ್ನಾಟಕ ಭಾಗದಲ್ಲಿ ನೆರೆಹಾನಿಯಿಂದ ಜನಸಾಮಾನ್ಯರು ಸಹ ಮನೆಗಳನ್ನು ಕಳೆದುಕೊಂಡು ಸಂಕಷ್ಟ ಅನುಭವಿಸುತ್ತಿದ್ದಾರೆ. ರೈತ ವಿರೋಧಿ ಕಾಂಗ್ರೆಸ್ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಗಳು ನೆರವಿಗೆ ಧಾವಿಸದೆ, ಪರಿಹಾರಗಳನ್ನು ಒದಗಿಸಿದೆ ನಿರ್ಲಕ್ಷ್ಯವಹಿಸಿ ಈ ಕೂಡಲೇ ರೈತರ ಸಾಲ ಮನ್ನಾ ಮಾಡಬೇಕೆಂದು ನಿಖಿಲ್ ಕುಮಾರಸ್ವಾಮಿ ಅವರು ಒತ್ತಾಹಿಸಿದ್ದಾರೆ.
ನಂತರ ಬೆಳೆ ಹಾನಿ, ಮನೆ ಕುಸಿತ ಪ್ರದೇಶಗಳಿಗೆ ಭೇಟಿ ನೀಡಿ ಅದರ ವಸ್ತು ಸ್ಥಿತಿ ವರದಿಯನ್ನು ರಾಜ್ಯ ಸರ್ಕಾರಕ್ಕೆ ನೀಡಲಿದ್ದೇವೆ. ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲು ಜನತಾದಳ ಜಾತ್ಯತೀತ ಪಕ್ಷದ ವತಿಯಿಂದ ರಾಜ್ಯ ಪ್ರವಾಸ ಕೈಗೊಳ್ಳಲಾಗಿದೆ ಎಂದು ಹೇಳಿದರು.