ಅಸ್ಸಾಂ: ಅಸ್ಸಾಂ ದೇಶದಲ್ಲಿ ವೇಗವಾಗಿ ಬೆಳೆಯುತ್ತಿರುವ ರಾಜ್ಯಗಳಲ್ಲಿ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಸ್ಸಾಂನಲ್ಲಿ ಮಾತನಾಡಿದ ಅವರು, ಪ್ರಸ್ತುತ ವಿಶ್ವದಲ್ಲಿ ಭಾರತ ವೇಗವಾಗಿ ಬೆಳೆಯುತ್ತಿರುವ ದೇಶವಾಗಿದೆ,
Advertisement
ಅಸ್ಸಾಂ ದೇಶದಲ್ಲಿ ವೇಗವಾಗಿ ಬೆಳೆಯುತ್ತಿರುವ ರಾಜ್ಯಗಳಲ್ಲಿ ಒಂದಾಗಿದೆ. ಒಂದು ಕಾಲದಲ್ಲಿ ಹೆಣಗಾಡುತ್ತಿದ್ದ ಅಸ್ಸಾಂ ಈಗ ಗಮನಾರ್ಹ ಬೆಳವಣಿಗೆ ಸಾಧಿಸುತ್ತಿದೆ. 13% ಬೆಳವಣಿಗೆಯ ದರ ಹೊಂದಿದೆ. ಇದು ಅಸ್ಸಾಂ ಜನರ ಕಠಿಣ ಶ್ರಮ ಹಾಗೂ ಬಿಜೆಪಿ ಡಬಲ್ ಎಂಜಿನ್ ಸರ್ಕಾರದ ಫಲಿತಾಂಶವೂ ಆಗಿದೆ ಎಂದು ನುಡಿದರು.
ದಶಕಗಳ ಕಾಲ ಅಸ್ಸಾಂ ಆಳಿದ ಕಾಂಗ್ರೆಸ್ ಪಕ್ಷವು ಬ್ರಹ್ಮಪುತ್ರ ನದಿಗೆ ಕೇವಲ 3 ಸೇತುವೆಗಳನ್ನು ನಿರ್ಮಿಸಿತು, ಆದ್ರೆ ನಾವು ಕಳೆದ 10 ವರ್ಷಗಳಲ್ಲಿ 6 ಸೇತುವೆಗಳನ್ನು ನಿರ್ಮಿಸಿದ್ದೇವೆ ಎಂದು ಹೇಳಿದರು. ಭಾಷಣದ ವೇಲೆ ಆಪರೇಷನ್ ಸಿಂಧೂರದ ಯಶಸ್ಸನ್ನು ಮೋದಿ ಸ್ಮರಿಸಿದರು.