HomeKarnataka Newsಕರ್ನಾಟಕದ ಈ ಜಿಲ್ಲೆಗಳಲ್ಲಿ ಸೆ.21ರವರೆಗೂ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

ಕರ್ನಾಟಕದ ಈ ಜಿಲ್ಲೆಗಳಲ್ಲಿ ಸೆ.21ರವರೆಗೂ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

For Dai;y Updates Join Our whatsapp Group

Spread the love

ಬೆಂಗಳೂರು: ಕರ್ನಾಟಕದಲ್ಲಿ ಮಳೆ ಮುಂದುವರಿದಿದ್ದು, ಉತ್ತರ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಈ ನಡುವೆ ಅಥಣಿ, ಮಹಾಲಿಂಗಪುರ, ಝಲ್ಕಿ, ತಾವರಗೇರಾ, ಗೋಕಾಕ್, ಬೀದರ್, ಕುಷ್ಟಗಿ, ಕಾರ್ಕಳ, ಗಂಗಾವತಿ, ಭಾಲ್ಕಿ, ತಿಡಗುಂಡಿ, ಸೇಡಬಾಳ, ರಬಕವಿ, ಮುದಗಲ್, ಮುದ್ದೇಬಿಹಾಳ, ಮಸ್ಕಿ, ಮಧುಗಿರಿ, ಹಿರಿಯೂರು, ಚಿತ್ತಾಪುರ್, ಭಾಗಮಂಡಲ, ಬೆಳಗಾವಿ, ಬಾದಾಮಿ, ಆನವಟ್ಟಿ, ಆಲಮಟ್ಟಿಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ದಾಖಲಾಗಿದೆ.

ಬೇರೆಡೆ, ಎಚ್‌ಎಎಲ್‌ನಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಹಾಗೂ 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದ ಇತರ ಭಾಗಗಳಲ್ಲಿ 28.0 ಗರಿಷ್ಠ ಮತ್ತು 20.4 ಕನಿಷ್ಠ, ಕೆಐಎಎಲ್‌ನಲ್ಲಿ 28.7 ಗರಿಷ್ಠ, ಜಿಕೆವಿಕೆಯಲ್ಲಿ 27.0 ಗರಿಷ್ಠ ಹಾಗೂ 18.2 ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!