ಸೆ.17ರಂದು ಶ್ರೀ ವಿಶ್ವಕರ್ಮ ಜಯಂತಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ ಇವರ ಸಹಯೋಗದಲ್ಲಿ ಶ್ರೀ ವಿಶ್ವಕರ್ಮ ಜಯಂತಿ–2025 ಅನ್ನು ಸೆ.17ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.

Advertisement

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಶಿವರಾಜ ಎಸ್. ತಂಗಡಗಿ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ.

ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ, ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್, ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ, ಸಂಸದ ಪಿ.ಸಿ. ಗದ್ದಿಗೌಡರ್, ವಿ.ಪ. ಸದಸ್ಯರಾದ ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ, ನರಗುಂದ ಶಾಸಕ ಸಿ.ಸಿ. ಪಾಟೀಲ, ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಆಗಮಿಸಲಿದ್ದಾರೆ.

ಜಿಲ್ಲಾಧಿಕಾರಿ ಹಾಗೂ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ ಸರ್ವರಿಗೂ ಸ್ವಾಗತ ಕೋರಿದ್ದಾರೆ.

ವಿಶೇಷ ಆಹ್ವಾನಿತರಾಗಿ ಯೋಜನೆ, ಕಾರ್ಯಕ್ರಮ, ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಡಾ. ವೆಂಕಟೇಶ್ ಎಂ.ವಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಕೆ.ಎಂ. ಗಾಯತ್ರಿ ಆಗಮಿಸಲಿದ್ದು, ಹಿರಿಯ ಸಾಹಿತಿ ಡಿ.ವಿ. ಬಡಿಗೇರ ಉಪನ್ಯಾಸ ನೀಡಲಿದ್ದಾರೆ.


Spread the love

LEAVE A REPLY

Please enter your comment!
Please enter your name here