ರಾಮನಗರ: ಮುಂದಿನ ಬಾರಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ನೂರು ಪರ್ಸೆಂಟ್ ಗ್ಯಾರಂಟಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ನಮ್ಮ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬಿಡದಿ ಟೌನ್ ಶಿಪ್ ಯೋಜನೆ ಕೈಬಿಡುತ್ತೇವೆ, ಅಲ್ಲಿವರೆಗೆ ಸರ್ವೆ ಕಾರ್ಯ ಹಾಗೂ ಭೂ ಸ್ವಾಧೀನ ಆಗದಂತೆ ರೈತರು ನೋಡಿಕೊಳ್ಳಬೇಕು ಎಂದರು.
Advertisement
ಕಾಂಗ್ರೆಸ್ ನಾಯಕರು ದೆಹಲಿಗೆ ಹೋಗಿ ನಮ್ಮ ತೆರಿಗೆ – ನಮ್ಮ ಹಕ್ಕು ಎಂದು ಹೋರಾಟ ಮಾಡುತ್ತಾರೆ. ಇಲ್ಲಿ ನಮ್ಮ ಭೂಮಿ – ನಮ್ಮ ಹಕ್ಕು ಎಂದ ಹೋರಾಟ ಮಾಡುತ್ತಿರುವ ರೈತರಿಗೆ ಅವರ ಭೂಮಿಯನ್ನು ಅವರಿಗೆ ಬಿಟ್ಟು ಕೊಡಿ.ರೈತರ ಎಷ್ಟೋ ಹೋರಾಟಗಳು ಯಶಸ್ಸು ಕಂಡಿವೆ. ಸರ್ಕಾರ ಭೂ ಸ್ವಾಧೀನ ಪ್ರಕ್ರಿಯೆಯಿಂದ ಹಿಂದೆ ಸರಿಯದಿದ್ದರೆ ದೇವನಹಳ್ಳಿ ಮಾದರಿಯಲ್ಲಿ ಹೋರಾಟ ನಡೆಸಬೇಕು ಎಂದು ಕರೆ ನೀಡಿದರು.