ಚಿಕ್ಕೋಡಿ:- ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹುಕ್ಕೇರಿ ಶಹಾಬಂದರ ಗ್ರಾಮದಲ್ಲಿ ಜರುಗಿದೆ.
Advertisement
ಮಹಾಂತೇಶ್ ಬುಕನಟ್ಟಿ (24) ಕೊಲೆಯಾದ ಯುವಕ. ಯುವಕ ಕೆಲಸ ಮುಗಿಸಿ ಊರಿಗೆ ವಾಪಸ್ ಆಗಿದ್ದ. ಈ ವೇಳೆ ಬಸ್ ಇಳಿಯುತ್ತಿದ್ದಂತೆ ಹಿಂದಿನಿಂದ ಬಂದು ಮಚ್ಚಿನಿಂದ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.
ಕೊಲೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ಯಮಕನಮರಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.