ರಾಹುಲ್ ಗಾಂಧಿ ಮಾಡಿರುವ ಆರೋಪಗಳು ಆಧಾರ ರಹಿತ: ಚುನಾವಣಾ ಆಯೋಗ

0
Spread the love

ನವದೆಹಲಿ: ಕರ್ನಾಟಕದ ಕಲಬುರಗಿಯ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ ನಡೆದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಮಾಡಿರುವ ಆರೋಪಗಳು ತಪ್ಪಾಗಿದ್ದು ಆಧಾರರಹಿತವಾಗಿವೆ ಎಂದು ಚುನಾವಣಾ ಆಯೋಗ  ಹೇಳಿದೆ.

Advertisement

ರಾಹುಲ್ ಗಾಂಧಿ ಆರೋಪಿಸಿದಂತೆ ಸಾರ್ವಜನಿಕರು ಯಾವುದೇ ಮತವನ್ನು ಆನ್‌ಲೈನ್‌ನಲ್ಲಿ ಅಳಿಸಲು ಸಾಧ್ಯವಿಲ್ಲ. ವ್ಯಕ್ತಿಗೆ ತಮ್ಮ ಅಭಿಪ್ರಾಯವನ್ನು ತಿಳಿಸಲು ಅವಕಾಶ ನೀಡದೆ ಯಾವುದೇ ಅಳಿಸುವಿಕೆ ನಡೆಯುವುದಿಲ್ಲ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ತಿಳಿಸಿದೆ.

2023 ರಲ್ಲಿ ಕಲಬುರಗಿ ಜಿಲ್ಲೆಯ ಆಳಂದ್‌ ವಿಧಾನಸಭಾ ಕ್ಷೇತ್ರದಲ್ಲಿ ಮತಗಳನ್ನು ಅಳಿಸಲು ಕೆಲವು ವಿಫಲ ಪ್ರಯತ್ನಗಳನ್ನು ಮಾಡಲಾಗಿತ್ತು. ಈ ವಿಷಯದ ಬಗ್ಗೆ ತನಿಖೆ ನಡೆಸಲು ಚುನಾವಣಾ ಆಯೋಗದಿಂದಲೇ ಎಫ್‌ಐಆರ್‌ ದಾಖಲಿಸಲಾಗಿದೆ ಎಂದಿದೆ. ಈ ಕ್ಷೇತ್ರದಿಂದ 2018 ರಲ್ಲಿ ಬಿಜೆಪಿಯ ಸುಭಾಷ್ ಗುತ್ತೇದಾರ್ ಗೆದ್ದಿದ್ದರೆ 2023 ರಲ್ಲಿ ಕಾಂಗ್ರೆಸ್‌ನ ಬಿ ಆರ್ ಪಾಟೀಲ್ ಗೆದ್ದಿದ್ದರು.

 


Spread the love

LEAVE A REPLY

Please enter your comment!
Please enter your name here