ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾಡಳಿತ, ಗದಗ ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‌ನಲ್ಲಿ ಶ್ರೀ ವಿಶ್ವಕರ್ಮ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕೆತ್ತನೆಯ ವಿವಿಧ ವಿಭಾಗಗಳಲ್ಲಿ ಸಾಧನೆಗೈದ ಗದಗ ಶಿಲ್ಪಿಗಾರ ಕುಮಾರ ಬಡಿಗೇರ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ ಕೆ.ಆರ್., ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಕಾರ್ಮಿಕ ಇಲಾಖೆ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್.ಎಸ್. ಬುರಡಿ, ವಾರ್ತಾಧಿಕಾರಿ ವಸಂತ ಮಡ್ಲೂರ, ಶ್ರೀಧರ ಚಿನಗಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ವಿಶ್ವಕರ್ಮ ಸಮಾಜದ ಅಧ್ಯಕ್ಷರು ಹಾಗೂ ಸಮಾಜದ ಹಿರಿಯರು ಉಪಸ್ಥಿತರಿದ್ದರು.