ಬೆಂಗಳೂರು:- ವ್ಯಕ್ತಿಯೊಬ್ಬ ರಸ್ತೆಯ ಮಧ್ಯೆ ಹಾಸಿಗೆ ಹಾಸಿಕೊಂಡು ಮಲಗಿರುವ ವೀಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ.
Advertisement
ಈ ವಿಚಿತ್ರ ಘಟನೆ ನಡೆದಿರೋದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ. ಎಸ್, ಬೆಂಗಳೂರಿನ ಹಲಸೂರು ಠಾಣಾ ವ್ಯಾಪ್ತಿಯ ಬಿಜಿಎಸ್ ರಸ್ತೆಯಲ್ಲಿ ವ್ಯಕ್ತಿಯೊಬ್ಬ ರಸ್ತೆ ಮಧ್ಯೆ ಹಾಸಿಗೆ ಹಾಕಿ ಮಲಗುವುದರ ಮೂಲಕ ಹುಚ್ಚಾಟ ಮೆರೆದಿದ್ದಾನೆ. ಇದು ರೀಲ್ ಹುಚ್ಚೋ, ಪಬ್ಲಿಸಿಟಿ ಗಿಮ್ಮಿಕ್ಕೋ ಅಥವಾ ಕುಡಿದಿದ್ದಾನೋ ಎನ್ನುವುದರ ಬಗ್ಗೆ ಗೊತ್ತಿಲ್ಲ. ವ್ಯಕ್ತಿಯ ಈ ಹುಚ್ಚಾಟದಿಂದ ಕೆಲ ಕಾಲ ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ಈ ಘಟನೆಯಿಂದ ಅನೇಕ ಜನರು ತೊಂದರೆ ಅನುಭವಿಸಿದ್ದಾರೆ.
ಈ ಕುರಿತು ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ವ್ಯಕ್ತಿಯು ಪಾನಮತ್ತನಾಗಿರಲಿ ಅಥವಾ ಮಾನಸಿಕ ಅಸ್ವಸ್ಥನಾಗಿರಲಿ ಈ ರೀತಿ ವರ್ತಿಸುವುದು ಖಂಡನೀಯ ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.