ವಿಜಯಸಾಕ್ಷಿ ಸುದ್ದಿ, ಧಾರವಾಡ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಕರ್ನಾಟಕ ಕಾಲೇಜು ಮೈದಾನದಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕ್ರೀಡಾ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಯು ಆಯೋಜಿಸಿದ್ದ ಬೈಕ್ ರ್ಯಾಲಿ ಕಾರ್ಯಕ್ರಮವನ್ನು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಉದ್ಘಾಟಿಸಿದರು.
Advertisement
ವಿಜೇತಕುಮಾರ ಹೊಸಮಠ ನಾಯಕತ್ವದಲ್ಲಿ 10 ಬೈಕ್ ರೈಡರ್ಗಳು ಧಾರವಾಡದಿಂದ ವಿಧಾನಸೌಧದವರೆಗೆ ಜಾಥಾ ಹಮ್ಮಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಶುಭ ಪಿ, ಕ್ರೀಡಾ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಸದಾನಂದ ಅಮರಾಪುರ ಉಪಸ್ಥಿತರಿದ್ದರು.