• About
  • Advertise
  • Privacy & Policy
  • Contact
Monday, November 2, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಸಾಮಾಜಿಕ ನ್ಯಾಯದ ಬಗ್ಗೆ ಮಾಧ್ಯಮಗಳು ಜನರಲ್ಲಿ ಜಾಗೃತಿ ಮೂಡಿಸಲಿ: ಸಿಎಂ ಸಿದ್ದರಾಮಯ್ಯ

Vijaya Sakshi News Desk by Vijaya Sakshi News Desk
September 19, 2025
in Karnataka News
ಸಾಮಾಜಿಕ ನ್ಯಾಯದ ಬಗ್ಗೆ ಮಾಧ್ಯಮಗಳು ಜನರಲ್ಲಿ ಜಾಗೃತಿ ಮೂಡಿಸಲಿ: ಸಿಎಂ ಸಿದ್ದರಾಮಯ್ಯ
0
SHARES
2
VIEWS
Share on Facebook

ಬೆಂಗಳೂರು: ಸಮಾಜದಲ್ಲಿನ ಅಸಮಾನತೆಗೆ ಕಾರಣಗಳು ಹಾಗೂ ಸಾಮಾಜಿಕ ನ್ಯಾಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಮಾಧ್ಯಮಗಳು ತೊಡಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು.

ಅವರು ಇಂದು ಬೆಂಗಳೂರಿನ ವಾರ್ತಾ ಸೌಧದ ಸುಲೋಚನಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 2024 ನೇ ಕ್ಯಾಲೆಂಡರ್ ವರ್ಷದ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ 2017 ರಿಂದ 2023 ನೇ ಕ್ಯಾಲೆಂಡರ್ ವರ್ಷದ ಪರಿಸರ ಮತ್ತು ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ದಲ್ಲಿ ಭಾಗವಹಿಸಿ ಮಾತನಾಡಿದರು.

ಮಾಧ್ಯಮಗಳು ಸತ್ಯ ಅಸತ್ಯದ ಶೋಧನೆ ನಡೆಸಬೇಕು

ಅಭಿಪ್ರಾಯಗಳು ವಸ್ತುಸ್ಥಿತಿಯಿಂದ ಕೂಡಿರಬೇಕು. ಅನೇಕ ಬಾರಿ ಊಹಾ ಪತ್ರಿಕೋದ್ಯಮ ಆಗಿರುತ್ತದೆ , ಅದು ಆಗಬಾರದು. ಸತ್ಯ ಅಸತ್ಯಗಳನ್ನು ಪತ್ತೆ ಹಚ್ಚಿ, ಸತ್ಯವನ್ನು ಶೋಧನೆ ಮಾಡುವ ಕಾರ್ಯವನ್ನು ಪತ್ರಿಕೋದ್ಯಮ ಮಾಡಬೇಕು. ಯಾವುದೇ ಕಾರಣಕ್ಕೂ ಒಬ್ಬ ವ್ಯಕ್ತಿಯು ತಪ್ಪು ಮಾಡದಿದ್ದರೂ, ಸುಮ್ಮನೆ ಆರೋಪಗಳನ್ನು ಮಾಡಬಾರದು.

ಸರ್ಕಾರದಲ್ಲಿ ಎಲ್ಲವೂ ಸರಿಯಾಗಿರುವುದಿಲ್ಲ ನಿಜ, ಆದರೆ ಸರ್ಕಾರದ ಜನಪರ ವಿಚಾರಗಳನ್ನು ಜನರಿಗೆ ತಿಳಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಜನ ವಿರೋಧಿ ಕಾರ್ಯವನ್ನು ಸರ್ಕಾರ ಮಾಡಿದರೆ ಅದನ್ನೂ ಜನರಿಗೆ ತಿಳಿಸುವ ಕಾರ್ಯ ಮಾಡಬೇಕು ಎಂದರು.

ಸಮಾನ ಅವಕಾಶಗಳ ಮಹತ್ವ ಬಗ್ಗೆ ಜನರಲ್ಲಿ ಅರಿವು

ಸಮಾಜದಲ್ಲಿ ಜಾತಿ ವ್ಯವಸ್ಥೆ, ಅಸಮಾನತೆ ಇದೆ. ಸಾಮಾಜಿಕ ಅಸಮಾನತೆ ಬಗ್ಗೆ ಜನರಿಗೆ ತಿಳಿಸುವ ಕಾರ್ಯ ಮಾಡಬೇಕು. ಬಹುಸಂಖ್ಯಾತರಾಗಿರುವ ಜನ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿರುವುದು ಅಸಮಾನತೆಗೆ ಪ್ರಮುಖ ಕಾರಣ. ಇದನ್ನು ನೇರವಾಗಿ ಜನರಿಗೆ ತಿಳಿಸುವ ಪ್ರಯತ್ನದಲ್ಲಿ, ಯಾವುದೇ ರಾಜಿ ಇಲ್ಲದೆ, ಸಾಮಾಜಿಕ ನ್ಯಾಯ ಎಲ್ಲರಿಗೂ ಸಿಕ್ಕಿದೆಯೇ,

ಇಲ್ಲವೇ, ಸಮಬಾಳು, ಸಮಪಾಲು ಅನುಷ್ಠಾನಕ್ಕೆ ಬಂದಿದೆಯೇ ಎಂಬುದನ್ನು ಪರಿಶೀಲಿಸಬೇಕು. ಸಾಮಾಜಿಕ ನ್ಯಾಯ ಕೇವಲ ಭಾಷಣಕ್ಕೆ ಮಾತ್ರ ಸೀಮಿತವಾಗಿರಬೇಕಾದ ವಿಚಾರವಲ್ಲ. ಎಲ್ಲರಿಗೂ ದೇಶದ ವ್ಯವಸ್ಥೆಯಲ್ಲಿ ಇನ್ನೂ ಸಹ ಸಮಾನವಾದ ಅವಕಾಶ ಸಿಗದಿರಲು ಕಾರಣಗಳೇನು ಎಂಬ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಧ್ಯಮ ಮಾಡಬೇಕು ಎಂದರು.

ದಸರಾ- ಸಾಂಸ್ಕೃತಿಕ ನಾಡ ಹಬ್ಬ

ಇತ್ತೀಚಿಗೆ ಟಿವಿ ಚಾನೆಲ್‌ಗಳು ಇನ್ನೊಬ್ಬರ ಹೇಳಿಕೆ ಬಗ್ಗೆ ಪ್ರತಿಕ್ರಿಯೆಯನ್ನು ಕೇಳಿ ಸುದ್ದಿ ಮಾಡುತ್ತವೆ. ಅದರಲ್ಲಿ ಅನೇಕ ವಿಚಾರಗಳು ಸಮಾಜಕ್ಕೆ ಸಂಬಂಧವೇ ಪಟ್ಟಿರುವುದಿಲ್ಲ. ಸಮಾಜಕ್ಕೆ ಸಂಬಂಧಪಟ್ಟಂತಹ ವಿಚಾರಗಳ ಬಗ್ಗೆ ಪ್ರಶ್ನೆಗಳನ್ನು ಕೇಳಿ. ಭಾನು ಮುಷ್ತಾಕ್‌ ದಸರಾ ಉದ್ಘಾಟನೆಯನ್ನು ವಿಷಯವನ್ನಾಗಿಸಲು ಹೊರಟರು. ಹೈಕೋರ್ಟ್‌ ಮತ್ತು ಸುಪ್ರಿಂಕೋರ್ಟ್‌ ಸಹ ಇದನ್ನು ವಜಾಗೊಳಿಸಿದೆ.

ದಸರಾ ಹಬ್ಬ ಧಾರ್ಮಿಕ ವಿಚಾರವಲ್ಲ, ಅದು ನಾಡ ಹಬ್ಬವಾಗಿದ್ದು, ಸಾಂಸ್ಕೃತಿಕ ವಿಚಾರವಾಗಿದೆ. ನಮ್ಮಲ್ಲಿ ಸಹಬಾಳ್ವೆ ಇರಬೇಕು. ಸಮಾಜದಲ್ಲಿ ವೈವಿಧ್ಯತೆಯಲ್ಲಿ ಏಕತೆಯನ್ನು ನಿರ್ಮಾಣ ಮಾಡಬೇಕು. ಅಂಬೇಡ್ಕರ್ ಅವರು ಸ್ವಾತಂತ್ರ್ಯ ದೊರೆತ ಸಂದರ್ಭದಲ್ಲಿ ನಾವು ವೈರುಧ್ಯಗಳಿಂದ ಕೂಡಿದ ಸಮಾಜಕ್ಕೆ ಕಾಲಿಡುತ್ತಿದ್ದೇವೆ. ಸಮಾಜದ ದುರ್ಬಲ ವರ್ಗದವರ ಅಭಿವೃದ್ಧಿಯಾದರೆ ಮಾತ್ರ ನಿಜವಾದ ಅಭಿವೃದ್ಧಿ ಎಂದು ಹೇಳಿದ್ದರು.

ಸಮಸಮಾಜದ ಕನಸು ಕಂಡ ಪರ್ತಕರ್ತ

ವಡ್ಡರ್ಸೆ ರಘುರಾಮ ಶೆಟ್ಟರು ಸಮ ಸಮಾಜ ನಿರ್ಮಾಣದ ಕನಸು ಕಂಡ ಪತ್ರಕರ್ತರು. ಜಾತಿ ಸಮಸ್ಯೆಗಳ ವಿರುದ್ಧ ಬರೆದವರು ಎಂದು ವಿವರಿಸಿದರು.

ಪತ್ರಕರ್ತರು ಪರಿಸರ ನ್ಯಾಯಕ್ಕೆ ಬದ್ಧವಾಗಿರಬೇಕು

ಪರಿಸರ ಅಭಿವೃದ್ಧಿ ಸಂರಕ್ಷಣೆಗೆ ಮಾಧ್ಯಮಗಳು ಹೆಚ್ಚು ಒತ್ತು ನೀಡಬೇಕು. ಪತ್ರಕರ್ತರು ಪರಿಸರ ನ್ಯಾಯಕ್ಕೆ ಬದ್ಧವಾಗಿರಬೇಕು. ಸ್ವಾತಂತ್ರ್ಯ ಪೂರ್ವದ ಮಾಧ್ಯಮ ರಂಗಕ್ಕೂ ಇಂದಿನ ಮಾಧ್ಯಮ ರಂಗಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಸ್ವಾತಂತ್ರ್ಯೋತ್ತರ ಪತ್ರಿಕೋದ್ಯಮ ಶ್ರೀಮಂತರ ಕೈಗಳಿಗೆ ಸಿಕ್ಕಿಹಾಕಿಕೊಂಡಿದೆ. ಪತ್ರಕರ್ತರು ಇದನ್ನು ಅರ್ಥ ಮಾಡಿಕೊಂಡು ಕರ್ತವ್ಯ ನಿರ್ವಹಿಸಬೇಕಿದೆ ಎಂದರು.

ಮಹಿಳೆಯರಿಗೂ ಸಮಾನತೆ

ನಮ್ಮ ಸಮಾಜದಲ್ಲಿ ಜಾತಿ ವ್ಯವಸ್ಥೆ ಹೇಗೆ ಬೇರು ಬಿಟ್ಟಿದೆ ಎಂದರೆ ಐದಾರು ವರ್ಷಗಳಲ್ಲಿ, ಹತ್ತಿಪ್ಪತ್ತು ವರ್ಷಗಳಲ್ಲಿ ಹೋಗುವಂತದ್ದಲ್ಲ. ಆದರೆ ಅಸಮಾನತೆಯ ಮಟ್ಟವನ್ನು ಕಡಿಮೆ ಮಾಡಿ ಸಮ ಸಮಾಜ ನಿರ್ಮಾಣಕ್ಕೆ ನಮ್ಮ ಸರ್ಕಾರ ಅನೇಕ ಜನಪರ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಮಹಿಳೆಯರಿಗೂ ಸಮಾನತೆ ಬರಬೇಕು ಎನ್ನುವ ನಿಟ್ಟಿನಲ್ಲಿ ಮಹಿಳಾ ಸಬಲೀಕರಣಕ್ಕೂ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಎಲ್ಲರ ಅಭಿವೃದ್ಧಿಯೇ ನಿಜವಾದ ಅಭಿವೃದ್ಧಿ , ದುರ್ಬಲ ವರ್ಗದವರ ಅಭಿವೃದ್ಧಿಯೇ ನಿಜವಾದ ಅಭಿವೃದ್ಧಿ ಎಂದರು.

ಶಾಲಾಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ

ಬಹಳಷ್ಟು ಜನರು ಸಂವಿಧಾನವನ್ನೇ ಓದಿರುವುದಿಲ್ಲ ಇದೇ ಕಾರಣಕ್ಕೆ ನಮ್ಮ ಸರ್ಕಾರ, ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವಂತಹ ಕಾರ್ಯಕ್ರಮ ಹಮ್ಮಿಕೊಂಡಿತು ಸಂವಿಧಾನದ ಕರ್ತವ್ಯಗಳನ್ನು, ಹಕ್ಕುಗಳನ್ನು ತಿಳಿದುಕೊಂಡಲ್ಲಿ ಜನರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಸಹಾಯಕವಾಗುತ್ತದೆ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಕೆಲಸ ಮಾಡಿದರೆ ಸಮಾಜ, ನಾಡು ದೇಶ ಎಲ್ಲಕ್ಕೂ ಒಳ್ಳೆಯದಾಗುತ್ತದೆ ಎಂದರು.

ಸುಮಾರು 2017ರಿಂದ ಬಾಕಿ ಇದ್ದ ಪ್ರಶಸ್ತಿಗಳನ್ನು ಇಂದು ಪ್ರದಾನ ಮಾಡಲಾಗಿದೆ ಆಯಾ ವರ್ಷದ ಪ್ರಶಸ್ತಿಗಳನ್ನು ಆಯಾ ವರ್ಷವೇ ನೀಡಿದರೆ ಉತ್ತಮ. ಅನೇಕ ವರ್ಷಗಳ ಪ್ರಶಸ್ತಿಗಳನ್ನು ಒಟ್ಟಿಗೆ ನೀಡುವುದು ಒಳ್ಳೆಯ ಪದ್ಧತಿಯಲ್ಲ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದರು.

Tags: BreakingNewsKannadaLatestNewsKarnatakasiddaramaihVijayasakshivijayasakshinews
ShareSendShare
Previous Post

ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ್ದ ಇಬ್ಬರು ಅರೆಸ್ಟ್!

Next Post

ಪಿಎಲ್‌ಡಿ ಬ್ಯಾಂಕ್ ಅಭಿವೃದ್ಧಿಗೆ ಸದಾ ಬದ್ಧ: ಶಾಸಕ ಜಿ.ಎಸ್. ಪಾಟೀಲ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಪಿಎಲ್‌ಡಿ ಬ್ಯಾಂಕ್ ಅಭಿವೃದ್ಧಿಗೆ ಸದಾ ಬದ್ಧ: ಶಾಸಕ ಜಿ.ಎಸ್. ಪಾಟೀಲ

ಪಿಎಲ್‌ಡಿ ಬ್ಯಾಂಕ್ ಅಭಿವೃದ್ಧಿಗೆ ಸದಾ ಬದ್ಧ: ಶಾಸಕ ಜಿ.ಎಸ್. ಪಾಟೀಲ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಡಿಕೆಶಿ ಅವರನ್ನು ಸಿಎಂ ಆಗಲು ಸಿದ್ದರಾಮಯ್ಯ ಬಿಡೋದಿಲ್ಲ: ಶ್ರೀರಾಮುಲು

ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕುಮಾರಸ್ವಾಮಿಗೆ ಮಸಿ ಬಳಿಯುವ ಯತ್ನ: ಸಿದ್ದರಾಮಯ್ಯ ವಿರುದ್ಧ ಶ್ರೀರಾಮುಲು ವಾಗ್ದಾಳಿ!

November 2, 2026
ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ; ₹9 ಸಾವಿರ ಕೋಟಿ ನಷ್ಟದ ಲೆಕ್ಕ ಬಿಚ್ಚಿಟ್ಟ ಸಚಿವರು!

ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ; ₹9 ಸಾವಿರ ಕೋಟಿ ನಷ್ಟದ ಲೆಕ್ಕ ಬಿಚ್ಚಿಟ್ಟ ಸಚಿವರು!

November 2, 2026
ದೇವಿ ದರ್ಶನಕ್ಕೆ ಭಕ್ತರ ನೂಕುನುಗ್ಗಲು; ಮೂರೇ ದಿನದಲ್ಲಿ ಹಾಸನಾಂಬೆ ದೇಗುಲಕ್ಕೆ ಹರಿದುಬಂತು 6.50 ಕೋಟಿ

ದೇವಿ ದರ್ಶನಕ್ಕೆ ಭಕ್ತರ ನೂಕುನುಗ್ಗಲು; ಮೂರೇ ದಿನದಲ್ಲಿ ಹಾಸನಾಂಬೆ ದೇಗುಲಕ್ಕೆ ಹರಿದುಬಂತು 6.50 ಕೋಟಿ

November 2, 2026
ಮುಷ್ಕರಕ್ಕೆ ಹೋದ್ರೆ ಸಂಬಳ ಕಟ್! KSRTC ನೌಕರರಿಗೆ ಅಕ್ರಮ್ ಪಾಷಾ ಖಡಕ್ ವಾರ್ನಿಂಗ್

ದೀಪಾವಳಿ ಹಬ್ಬಕ್ಕೆ KSRTC ಭರ್ಜರಿ ಸಿದ್ಧತೆ; ನ.6ರಿಂದ ವಿಶೇಷ ಬಸ್ ಸೇವೆ ಆರಂಭ!

November 2, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಡಿಕೆಶಿ ಅವರನ್ನು ಸಿಎಂ ಆಗಲು ಸಿದ್ದರಾಮಯ್ಯ ಬಿಡೋದಿಲ್ಲ: ಶ್ರೀರಾಮುಲು

ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕುಮಾರಸ್ವಾಮಿಗೆ ಮಸಿ ಬಳಿಯುವ ಯತ್ನ: ಸಿದ್ದರಾಮಯ್ಯ ವಿರುದ್ಧ ಶ್ರೀರಾಮುಲು ವಾಗ್ದಾಳಿ!

November 2, 2026
ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ; ₹9 ಸಾವಿರ ಕೋಟಿ ನಷ್ಟದ ಲೆಕ್ಕ ಬಿಚ್ಚಿಟ್ಟ ಸಚಿವರು!

ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ; ₹9 ಸಾವಿರ ಕೋಟಿ ನಷ್ಟದ ಲೆಕ್ಕ ಬಿಚ್ಚಿಟ್ಟ ಸಚಿವರು!

November 2, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper