HomeGadag Newsಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸಹಿ ಸಂಗ್ರಹಣಾ ಅಭಿಯಾನಕ್ಕೆ 21ರಂದು ಚಾಲನೆ

ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸಹಿ ಸಂಗ್ರಹಣಾ ಅಭಿಯಾನಕ್ಕೆ 21ರಂದು ಚಾಲನೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ದಿ. ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿರುವ ಗದಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ‘ದೇಶವ್ಯಾಪಿ ಮತಕಳ್ಳತನ ನಿಲ್ಲಿಸಿ’ ಸಹಿ ಸಂಗ್ರಹಣಾ ಅಭಿಯಾನಕ್ಕೆ ಸೆ. 21ರಂದು ಬೆಳಿಗ್ಗೆ 11ಕ್ಕೆ ಚಾಲನೆ ದೊರೆಯಲಿದೆ.

ಕಾಂಗ್ರೆಸ್ ಪಕ್ಷದ ಮಾಜಿ ಹಾಗೂ ಹಾಲಿ ಶಾಸಕರು, ಪಕ್ಷದ ಜಿಲ್ಲಾ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ಎಪಿಎಂಸಿ ಪಕ್ಷದ ಅಧ್ಯಕ್ಷರು ಹಾಗೂ ಸದಸ್ಯರು, ನಗರಸಭೆ, ಪಟ್ಟಣ ಪಂಚಾಯಿತಿ, ಪುರಸಭೆ ಅಧ್ಯಕ್ಷರು ಹಾಗೂ ಸದಸ್ಯರು, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎಸ್‌ಸಿ/ಎಸ್‌ಟಿ, ಅಲ್ಪಸಂಖ್ಯಾತರ, ವಿದ್ಯಾರ್ಥಿ ಕಾಂಗ್ರೆಸ್, ಕಾಂಗ್ರೆಸ್ ಸೇವಾದಳ, ಹಿಂದುಳಿದ ವರ್ಗ, ಸಾಮಾಜಿಕ ಜಾಲತಾಣ, ರಾಜೀವಗಾಂಧಿ ಪಂಚಾಯತ್ ಸಂಘಟನೆ, ಮಾಜಿ ಸೈನಿಕರ ವಿಭಾಗ, ಮೀನುಗಾರ ವಿಭಾಗ, ಕಾರ್ಮಿಕರ ವಿಭಾಗ, ಐಎನ್‌ಟಿಯುಸಿ, ಕಾನೂನು ಮತ್ತು ಮಾನವ ಹಕ್ಕು ವಿಭಾಗ, ಕಿಸಾನ್ ಮತ್ತು ಖೆತ್ ಮಜ್ದೂರ್ ವಿಭಾಗ, ವೈದ್ಯರ ವಿಭಾಗ, ವೃತ್ತಿಪರ ವಿಭಾಗ, ಪದವಿಧರ ಹಾಗೂ ಶಿಕ್ಷಕರ ವಿಭಾಗ, ನೀತಿ ಮತ್ತು ಸಂಶೋಧನೆ ತರಬೇತಿ ವಿಭಾಗ, ವಿಕಲಚೇತನರ ವಿಭಾಗ, ಲೀಗಲ್ ರಿಫಾರ್ಮ್ಸ್ ವಿಭಾಗ, ಐಟಿ ಮತ್ತು ಡಾಟಾ ವಿಭಾಗ, ಮಾಧ್ಯಮ ಮತ್ತು ಸಂಪರ್ಕ ಇಲಾಖೆ ವಿಭಾಗಗಳ ಅಧ್ಯಕ್ಷರು ಹಾಗೂ ಸದಸ್ಯರು, ಪಕ್ಷದ ಅಭಿಮಾನಿಗಳು ಪಾಲ್ಗೊಳ್ಳಬೇಕೆಂದು ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ವಿ.ಬಿ. ಸೋಮನಕಟ್ಟಿಮಠ, ಗದಗ-ಬೆಟಗೇರಿ ಶಹರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ, ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೃಷ್ಣಗೌಡ ಎಚ್.ಪಾಟೀಲ ಹಾಗೂ ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ವಿನಂತಿಸಿದ್ದಾರೆ.

ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಕರ್ನಾಟಕ ಖನಿಜ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ ಅಧ್ಯಕ್ಷತೆ ವಹಿಸುವರು. ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ಸಹಿ ಸಂಗ್ರಹಣಾ ಅಭಿಯಾನಕ್ಕೆ ಚಾಲನೆ ನೀಡುವರು. ಮಾಜಿ ಶಾಸಕರಾದ ಡಿ.ಆರ್. ಪಾಟೀಲ, ಬಿ.ಆರ್. ಯಾವಗಲ್, ಜಿ.ಎಸ್. ಗಡ್ಡದೇವರಮಠ, ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ, ಮುಖಂಡರಾದ ಆನಂದಸ್ವಾಮಿ ಗಡ್ಡದೇವರಮಠ, ಸುಜಾತಾ ದೊಡ್ಡಮನಿ ಪಾಲ್ಗೊಳ್ಳುವರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img