ಬೆಂಗಳೂರು:– ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
Advertisement
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜೊತೆಗೆ ಕರಾವಳಿ ಜಿಲ್ಲೆಗಳು ಅಂದರೆ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಟ ಮತ್ತು ಕನಿಷ್ಟ ತಾಪಮಾನ ಕ್ರಮವಾಗಿ 27°C ಮತುೆ 20°C ಇರುವ ಸಾಧ್ಯತೆ ಇದೆ.