ಬೆಂಗಳೂರು:– ಶಾರ್ಟ್ ಸರ್ಕ್ಯೂಟ್ ನಿಂದಾಗಿ ಖಾಲಿ ಗೋಡೌನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಬೆಂಗಳೂರಿನ ಕಾಟನ್ ಪೇಟೆಯಲ್ಲಿ ಜರುಗಿದೆ.
Advertisement
ಮಾಹಿತಿ ಆಧರಿಸಿ ಕಾಟನ್ ಪೇಟೆಯ ಪಿಎಸ್ಐ ಹರೀಶ್ ಅವರು ಸ್ಥಳಕ್ಕೆ ಧಾವಿಸಿ ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ತಡರಾತ್ರಿ 9.30 ರ ಸುಮಾರಿಗೆ ಈ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಯಾವುದೇ ಪ್ರಾಣಪಾಯವಾಗಿಲ್ಲ.
ಉಪ್ಪಾಟಪೇಟೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಸಿದೆ.