ಕರ್ನಾಟಕದ ಜನತೆಗೆ ಗುಡ್ ನ್ಯೂಸ್; ಸೋಮವಾರದಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ

0
Spread the love

ಬೆಂಗಳೂರು:-ಕರ್ನಾಟಕದ ಜನತೆಗೆ ಕೆಎಂಎಫ್ ಗುಡ್ ನ್ಯೂಸ್ ಕೊಟ್ಟಿದ್ದು, ಸೆಪ್ಟೆಂಬರ್ 22ರ ಸೋಮವಾರದಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ ಆಗಲಿದೆ.

Advertisement

ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ ಜಿಎಸ್​​ಟಿಯನ್ನು ಇಳಿಕೆ ಬೆನ್ನಲ್ಲೇ ಇದೀಗ ನಂದಿನಿ ಮೊಸರು, ತುಪ್ಪ, ಬೆಣ್ಣೆ ಮತ್ತು ಲಸ್ಸಿ ಸೇರಿದಂತೆ ಹಲವು ಉತ್ಪನ್ನಗಳ ದರ ಇಳಿಕೆ ಆಗಿದ್ದು, ಸೋಮವಾರದಿಂದ ಹೊಸ ದರ ಜಾರಿಗೆ ಬರುವ ಸಾಧ್ಯತೆ ಇದೆ. ಆ ಮೂಲಕ ರಾಜ್ಯದ ಜನರಿಗೆ ಕೆಎಂಎಫ್​​ ಗುಡ್​​ ನ್ಯೂಸ್ ಕೊಟ್ಟಿದೆ. ಆದರೆ ಅಧಿಕೃತ ಆದೇಶ ಬಾಕಿಯಿದೆ.

ಜಿಎಸ್​​ಟಿ ಇಳಿಕೆ ಬೆನ್ನಲ್ಲೇ ದರ ಇಳಿಕೆಗೆ ಸಜ್ಜಾಗಿರುವ ಕೆಎಂಎಫ್​​ ಈ ಬಗ್ಗೆ ಶುಕ್ರವಾರ ಕೆಎಂಎಫ್​​ ಅಧಿಕಾರಿಗಳು ಸಭೆ ಮಾಡಿದ್ದಾರೆ. ಸಭೆಯಲ್ಲಿ ಯಾವುದರ ದರ ಎಷ್ಟು ಇಳಿಕೆ ಎಂಬುವುದನ್ನು ನಿರ್ಧಾರ ಮಾಡಲಾಗಿದೆ. ಮೊಸರಿನ ದರ ಲೀಟರ್​ಗೆ 4 ರೂ. ಇಳಿಕೆ ನಿರೀಕ್ಷೆ ಇದೆ. ಜೊತೆಗೆ ತುಪ್ಪ, ಬೆಣ್ಣೆ, ಲಸ್ಸಿ ಸೇರಿ ಹಲವು ಉತ್ಪನ್ನಗಳ ದರ ಕೂಡ ಇಳಿಕೆ ಆಗಿದೆ ಎಂದು ತಿಳಿದು ಬಂದಿದೆ.


Spread the love

LEAVE A REPLY

Please enter your comment!
Please enter your name here