ಬೆಂಗಳೂರು: ನಮ್ಮ ಸರ್ಕಾರ ಜಾತಿಗಣತಿ ಮಾಡುತ್ತಿಲ್ಲ, ಶೈಕಣಿಕ, ಆರ್ಥಿಕ ಸಮೀಕ್ಷೆ ಮಾಡುತ್ತಿದ್ದೇವೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಮಾಡುತ್ತಿರುವುದು ಜಾತಿಗಣತಿ ಅಲ್ಲ. ಶೈಕಣಿಕ, ಆರ್ಥಿಕ ಸಮೀಕ್ಷೆಯನ್ನು ನಾವು ಮಾಡುತ್ತಿದ್ದೇವೆ. ನಮಗೆ ಜಾತಿಗಣತಿ ಮಾಡುವ ಪವರ್ ಇಲ್ಲ.
Advertisement
ಕೇಂದ್ರ ಸರ್ಕಾರಕ್ಕೆ ಜಾತಿಗಣತಿ ಮಾಡುವ ಪವರ್ ಇದೆ. ನಾವು ಸ್ಪಷ್ಟವಾಗಿ ಆದೇಶ ಹೊರಡಿಸಿದ್ದೇವೆ ಎಂದರು. ಇನ್ನೂ ಸೆ.22ರಿಂದ ಅಕ್ಟೋಬರ್ 7ರವರೆಗೆ ಸಮೀಕ್ಷೆ ನಡೆಯಲಿದೆ. ಮನೆಮನೆಗೆ ಹೋಗಿ ಸಮೀಕ್ಷೆ ಮಾಡುತ್ತಾರೆ. ದಯಮಾಡಿ ಬಂದವರಿಗೆ ಎಲ್ಲಾ ಮಾಹಿತಿ ನೀಡಿ. 60 ಪ್ರಶ್ನೆಗಳಿಗೆ ಸಮಾಧಾನದಿಂದ ಉತ್ತರವನ್ನು ನೀಡಿ. ಯಾರ ಒತ್ತಡಕ್ಕೂ ಒಳಗಾಗದೆ ಉತ್ತರವನ್ನು ನೀಡಿ ಎಂದು ಹೇಳಿದರು.