ಬೆಂಗಳೂರು: ಬೆಂಗಳೂರಿನ ವಿಜಯನಗರದಲ್ಲಿರುವ ಆದಿ ಚುಂಚನಗಿರಿ ಮಠದಲ್ಲಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳ ನೇತೃತ್ವದಲ್ಲಿ ಒಕ್ಕಲಿಗರ ಸಭೆ ನಡೆದಿದೆ. ಬೆಂಗಳೂರಿನಲ್ಲಿ ಒಕ್ಕಲಿಗ ಸಮುದಾಯದ ಸಭೆಗೆ ಹಾಜರಾದ ಕುಮಾರಸ್ವಾಮಿ ಹಾಗೂ ಡಿಕೆ ಶಿವಕುಮಾರ್, ನಿರ್ಮಲಾನಂದ ಸ್ವಾಮೀಜಿ ಜತೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು.
ಬದ್ಧ ವೈರಿಗಳಂತೆ ಸದಾ ಒಬ್ಬರ ಮೇಲೊಬ್ಬರು ಕೆಂಡಕಾರುವ ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಸ್ವಾಮೀಜಿ ಅಕ್ಕ-ಪಕ್ಕದಲ್ಲೇ ಸಭೆಗೆ ಹಾಜರಾಗಿದ್ದಾರೆ. ಒಕ್ಕಲಿಗರ ಸಭೆಯಲ್ಲಿ ಡಿಸಿಎಂ ಡಿಕೆಶಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಪರಿಷತ್ ಸದಸ್ಯ ಸಿಟಿ ರವಿ, ಶಾಸಕ ಜಿಟಿ ದೇವೇಗೌಡ, ಸಂಸದ ಡಾ ಕೆ ಸುಧಾಕರ್,
ಅಶ್ವಥ್ ನಾರಾಯಣ್, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಸೇರಿ ಹಲವರು ಭಾಗಿಯಾಗಿದ್ದಾರೆ. ಸಭೆಯಲ್ಲಿ ಸ್ವಾಮೀಜಿಯ ಅಕ್ಕ-ಪಕ್ಕದಲ್ಲೇ ಇದ್ರೂ ಡಿಕೆ ಶಿವಕುಮಾರ್ ಹಾಗೂ ಕುಮಾರಸ್ವಾಮಿ ಪರಸ್ಪರ ಮಾತಾಡಲಿಲ್ಲ ಎನ್ನಲಾಗ್ತಿದೆ.ಒಕ್ಕಲಿಗ ಸಮಾಜದ ಶ್ರೀಗಳಾದ ನಿರ್ಮಾಲನಂದನಾಥ ಹಾಗೂ ನಂಜವಧೂತ ಸ್ವಾಮೀಜಿಗಳ ನೇತೃತ್ವದಲ್ಲಿ ಸಭೆ ಆರಂಭವಾಗಿದೆ.