ಕಲಬುರಗಿ: ಕಲಬುರಗಿಯಲ್ಲಿ ಘೋರ ಘಟನೆ ನಡೆದಿದ್ದು, ವ್ಯಕ್ತಿಯನ್ನು ಬೆತ್ತಲೆ ಮಾಡಿ ಕಟ್ಟಿಗೆಯಿಂದ ಹೊಡೆದು ವ್ಯಕ್ತಿಯನ್ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಕುಷ್ಟರೋಗಿಗಳ ಕಾಲೋನಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಚಾಂದ್ಸಾಬ್ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
Advertisement
ಶುಕ್ರವಾರ ರಾತ್ರಿ ಚಾಂದ್ಸಾಬ್ ಮನೆಯಲ್ಲೇ ಪರಿಚಿತರೊಂದಿಗೆ ಎಣ್ಣೆ ಪಾರ್ಟಿ ನಡೆಸಿದ್ದರು. ಈ ವೇಳೆ ಗಲಾಟೆ ನಡೆದು ಚಾಂದ್ಸಾಬ್ನನ್ನು ಬೆತ್ತಲೆ ಮಾಡಿ ಕಟ್ಟಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೃತರ ಪತ್ನಿ ದೆಹಲಿಯಲ್ಲಿ ವಾಸವಿದ್ದು,
ಪತಿಯ ಸಾವಿನ ಬಗ್ಗೆ ತಿಳಿದು ಕಲಬುರಗಿಯತ್ತ ಆಗಮಿಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.