ರಾಯಚೂರು:- ಜಾತಿಯಲ್ಲಿ ಕ್ರಿಶ್ಚಿಯನ್ ಶಬ್ದ ಬಳಕೆ ತೆಗೆದುಹಾಕಲು ಸಿಎಂ ಹೇಳಿದ್ದಾರೆ ಎಂದು ಸಚಿವ ಬೋಸರಾಜು ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜಾತಿಗಣತಿ ಮಾಡುತ್ತಿರುವುದು ಯಾವುದೇ ಜಾತಿ ಧರ್ಮಕ್ಕೆ ಸಂಬಂಧಪಟ್ಟದ್ದಲ್ಲ. ಜಾತಿಯಲ್ಲಿ ಕ್ರಿಶ್ಚಿಯನ್ ಶಬ್ದ ಬಳಕೆ ತೆಗೆದುಹಾಕಲು ಸಿಎಂ ಹೇಳಿದ್ದಾರೆ. ಜನರ ಭಾವನೆಗಳಿಗೆ ಸರ್ಕಾರ ಸ್ಪಂದಿಸುತ್ತಿದೆ, ಯಾರೂ ಇದಕ್ಕೆ ವಿರೋಧ ವ್ಯಕ್ತಪಡಿಸಿಲ್ಲ, ಎಲ್ಲರೂ ಒಟ್ಟಾಗಿ ಸಮೀಕ್ಷೆ ಮಾಡ್ತಾರೆ ಎಂದಿದ್ದಾರೆ.
ಇದೇ ವೇಳೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೆಲಿಕಾಪ್ಟರ್ ಖರೀದಿ ಮಾಡಿರುವ ವಿಚಾರವಾಗಿ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಯಾವಾಗಲೂ ಹೆಲಿಕಾಪ್ಟರ್‌ನಲ್ಲಿ ಓಡಾಡುತ್ತಾರೆ. ನಮ್ಮನ್ನೂ ಕರೆದುಕೊಂಡು ಹೋಗ್ತಾರೆ. ಸಿಎಂ ಆಗಲು ಪ್ರಚಾರಕ್ಕೆ ಹೆಲಿಕಾಪ್ಟರ್ ಖರೀದಿ ಮಾಡಿದ್ದಾರೆ ಅನ್ನೋದು ತಪ್ಪು ಕಲ್ಪನೆ. ಸಿಎಂ ಆಗಬೇಕು ಅಂತಾ ಎಲ್ಲರಿಗೂ ಇರುತ್ತೆ, ನಮಗೂ ಇರುತ್ತೆ ಎಂದು ಹೇಳಿದ್ದಾರೆ.
ನಾನು ಸತೀಶ್ ಜಾರಕಿಹೊಳಿ ಬಹಳ ವರ್ಷಗಳಿಂದ ರಾಜಕೀಯ ಮಾಡುತ್ತಿದ್ದೇವೆ. ಪಕ್ಷನಿಷ್ಟರಾಗಿ ಪಕ್ಷಕ್ಕೆ ಬದ್ಧರಾಗಿದ್ದೇವೆ, ಹೇಳುವವರಿಗೆ ಬುದ್ಧಿ ಇಲ್ಲ. ಸಚಿವ ಸಂಪುಟದಲ್ಲಿರುವ ಎಲ್ಲಾ ಸಚಿವರು ಪಕ್ಷಕ್ಕೆ ನಿಷ್ಠಾವಂತರಾಗಿದ್ದೇವೆ. ಬೇರೆ ಪಕ್ಷದಿಂದ ಬಂದವರು ಪಕ್ಷಕ್ಕೆ ಬದ್ಧರಾಗಿದ್ದಾರೆ. ಮುಖ್ಯಮಂತ್ರಿಗಳು ಕೂಡ ಬೇರೆ ಪಕ್ಷದಿಂದ ಬಂದವರು. ಅವರು ಪಕ್ಷಕ್ಕೆ ಬದ್ಧರಾಗಿ ಸಾಮಾಜಿಕ, ಆರ್ಥಿಕ ಶೈಕ್ಷಣಿಕವಾಗಿ ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.