ವಿಜಯಸಾಕ್ಷಿ ಸುದ್ದಿ, ಗದಗ: ಕೇಂದ್ರ ಹಾಗೂ ರಾಜ್ಯ ಸರ್ಕಾರ, ಆಯುಷ್ ಇಲಾಖೆ ಬೆಂಗಳೂರು, ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಗದಗ ಇವರ ಸಂಯುಕ್ತ ಆಶ್ರಯದಲ್ಲಿ ‘ಶ್ರೀ ಧನ್ವಂತರಿ ಜಯಂತಿ’ 10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ – 2025 ಕಾರ್ಯಕ್ರಮವನ್ನು ಸೆಪ್ಟೆಂಬರ್ 23ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ. ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ, ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್, ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ, ಸಂಸದ ಪಿ.ಸಿ. ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ, ನರಗುಂದ ಶಾಸಕ ಸಿ.ಸಿ. ಪಾಟೀಲ, ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಆಗಮಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ, ಆಯುಷ್ ನಿರ್ದೇಶನಾಲಯದ ಆಯುಕ್ತ ವಿಪಿನ್ ಸಿಂಗ್, ಜಿಲ್ಲಾಧಿಕಾರಿ ಹಾಗೂ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಆಗಮಿಸುವರು.
ಜಿಲ್ಲಾ ಆಯುಷ್ ಅಧಿಕಾರಿ ಡಾ. ಜಯಪಾಲಸಿಂಗ ಪಿ. ಸಮೋರೆಕರ ಸರ್ವರಿಗೂ ಸ್ವಾಗತ ಕೋರಿದ್ದಾರೆ.
ಆಯುರ್ವೇದ ಜಾಥಾ
ರಾಷ್ಟ್ರೀಯ ಆಯುರ್ವೇದ ದಿನಾಚರಣೆ ನಿಮಿತ್ತ ಸೆ. 22ರಂದು ಬೆಳಿಗ್ಗೆ 9 ಗಂಟೆಗೆ ಆಯುರ್ವೇದ ಜಾಥಾ ಜರುಗಲಿದೆ. ಸರ್ಕಾರಿ ಆಯುರ್ವೇದ ಆಸ್ಪತ್ರೆ, ಬೆಟಗೇರಿ ಆವರಣದಿಂದ ಪ್ರಾರಂಭಗೊಂಡು, ಪೊಲೀಸ್ ವಸತಿ ನಿಲಯದ ಮಾರ್ಗವಾಗಿ, ಶ್ರೀ ನೀಲಕಂಠ ಮಠ, ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನ, ಶ್ರೀ ಅಂಬಾಭವಾನಿ ವೃತ್ತ, ಶ್ರೀ ಸಹಸ್ರಾರ್ಜುನ ವೃತ್ತ ಮಾರ್ಗವಾಗಿ ಪುನಃ ಸರ್ಕಾರಿ ಆಯುರ್ವೇದ ಆಸ್ಪತ್ರೆ, ಬೆಟಗೇರಿ ಆವರಣಕ್ಕೆ ಜಾಥಾ ತಲುಪುವುದು.