ಮೈಸೂರು: ಮೈಸೂರು ದಸರಾಗೆ ಅದ್ದೂರಿಯಾಗಿ ಚಾಲನೆ ಸಿಕ್ಕಿದೆ. ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡಿದ್ದಾರೆ. ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದ್ದಾರೆ.
Advertisement
ಬೆಳಗ್ಗೆ 10:10 ರಿಂದ 10:40ರ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ವೇದಿಕೆಯಲ್ಲಿ ಬೆಳ್ಳಿಯ ರಥದಲ್ಲಿ ಇರುವ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಮತ್ತು ಗಣ್ಯರು ಪುಪ್ಪಾರ್ಚನೆ ನೆರವೇರಿಸುವ ಮೂಲಕ ನಾಡಹಬ್ಬಕ್ಕೆ ವಿದ್ಯುಕ್ತ ಚಾಲನೆ ನೀಡಿದರು.
ಉದ್ಘಾಟನೆಗೂ ಮುನ್ನ ಮೊದಲು, ಸಿಎಂ ಸಿದ್ದರಾಮಯ್ಯ ಹಾಗೂ ಬಾನು ಮುಷ್ತಾಕ್ ಅವರು ನಾಡದೇವತೆಗೆ ಪೂಜೆ ಸಲ್ಲಿಸಿ, ನಮಸ್ಕರಿಸಿದರು.
ಇಂದಿನಿಂದ ಆರಂಭವಾಗ 11 ದಿನಗಳ ನಾಡಹಬ್ಬ ದಸರಾ ಮಹೋತ್ಸವದ ಕಾರ್ಯಕ್ರಮಗಳಿಗೆ ಸಾಹಿತಿ ಹಾಗೂ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರು ಉದ್ಘಾಟಿಸಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಹೆಚ್.ಸಿ.ಮಹದೇವಪ್ಪ ಸೇರಿದಂತೆ ಗಣ್ಯರು ಹಾಜರಿದ್ದರು.