ಕಲಬುರಗಿ:- ಜಿಲ್ಲೆಯಾದ್ಯಂತ ವರುಣನ ಅಬ್ಬರ ಮುಂದುವರಿದಿದ್ದು, ಕನಕಪೂರ, ಅಣವಾರ, ಪೋಲಕಪಳ್ಳಿ ಗ್ರಾಮದ ಸೇತುವೆ ಜಲಾವೃತವಾಗಿವೆ.
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಾರಂಪಳ್ಳಿ,ಅಣವಾರ, ಪೋಲಕಪಳ್ಳಿ ಗ್ರಾಮಗಳು
ಮಳೆಯಿಂದಾಗಿ ಅವಾಂತರಗಳೇ ಸೃಷ್ಟಿಯಾಗಿದೆ. ನಿರಂತರ ಮಳೆಗೆ ರೈತರ ಜಮೀನುಗಳಿಗೆ ನೀರು ನುಗ್ಗಿದ್ದು, ಚಿಂಚೋಳಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ತೊಗರಿ ಬೆಳೆ ಸಂಪೂರ್ಣ ಹಾಳಾಗಿವೆ.
ಗೋಡೆ ಕುಸಿದು ಬಾಲಕಿ ಸಾವು:
ಬಾರಿ ಮಳೆಗೆ ಶಿಥಿಲಗೊಂಡಿದ್ದ ಮನೆಯ ಗೋಡೆ ಕುಸಿದು ಬಾಲಕಿ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ಪಟ್ಟಣದಲ್ಲಿ ಘಟನೆ ಜರುಗಿದೆ.
ಸಾನಿಯಾ ತಾಂಬೊಳಿ (17) ಮೃತ ಬಾಲಕಿ. ಗೋಡೆ ಕುಸಿತದ ಪರಿಣಾಮ ನಾಲ್ವರು ಮಕ್ಕಳು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳನ್ನು ಮೈಹೆಬೂಬ್, ನಿಶಾದ್, ಆಯಿಷಾ, ರಮಜಾನಬಿ ಎಂದು ಗುರುತಿಸಲಾಗಿದೆ.
ತಂದೆ ತಾಯಿ ಕೆಲಸದ ನಿಮಿತ್ತ ಬೇರೆ ಊರಿಗೆ ಹೋಗಿದ್ದಾಗ ದುರ್ಘಟನೆ ಸಂಭವಿಸಿದೆ. ಯಡ್ರಾಮಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.