ಒಂದು ನಿಗದಿತ ಧರ್ಮವನ್ನು ಬೆಳೆಸುವ ಉದ್ದೇಶ ಸರ್ಕಾರಕ್ಕೆ ಇದೆಯೇ?: ಛಲವಾದಿ ನಾರಾಯಣಸ್ವಾಮಿ

0
Spread the love

ಬೆಂಗಳೂರು: ಒಂದು ನಿಗದಿತ ಧರ್ಮವನ್ನು ಬೆಳೆಸುವ ಉದ್ದೇಶ ಸರಕಾರಕ್ಕೆ ಇದೆಯೇ? ಈ ಸಮೀಕ್ಷೆಯಲ್ಲಿ ಆದಿ ಆಂಧ್ರ ಕ್ರಿಶ್ಚಿಯನ್, ಆದಿ ಕರ್ನಾಟಕ ಕ್ರಿಶ್ಚಿಯನ್, ಆದಿದ್ರಾವಿಡ ಕ್ರಿಶ್ಚಿಯನ್ ಸೇರಿ ಹತ್ತಾರು ಜಾತಿಗಳನ್ನು ಸೇರಿಸಲು ನಿಮಗೆ ಯಾರು ಪ್ರೇರೇಪಣೆ ಕೊಟ್ಟಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನಿಸಿದ್ದಾರೆ. ಈ ಜಾತಿಗಳ ಕ್ರಿಶ್ಚಿಯನ್ ಟ್ಯಾಗ್ ಅನ್ನು ಸಮೀಕ್ಷೆಯ ವೇಳೆ ಸೇರಿಸಬಾರದು ಎಂದು ಆಗ್ರಹಿಸಿದ್ದಾರೆ.

Advertisement

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತಿ ಗಣತಿ ಮಾಡುವ ಅಧಿಕಾರ ರಾಜ್ಯ ಸರಕಾರಕ್ಕೆ ಇಲ್ಲ ಎಂದರು. ಸಾಮಾಜಿಕ- ಆರ್ಥಿಕ ಸರ್ವೇ ಇದೆಂದು ಹೇಳಿದ್ದಾರೆ. ಆದರೆ, ಇವರು ಜಾತಿಗಳಿಗೆ ಆದಿ ಆಂಧ್ರ ಕ್ರಿಶ್ಚಿಯನ್, ಆದಿ ಕರ್ನಾಟಕ ಕ್ರಿಶ್ಚಿಯನ್, ಆದಿದ್ರಾವಿಡ ಕ್ರಿಶ್ಚಿಯನ್, ಬಂಜಾರ ಕ್ರಿಶ್ಚಿಯನ್, ಬುಡಗ ಜಂಗಮ ಕ್ರಿಶ್ಚಿಯನ್,

ಹೊಲೆಯ ಕ್ರಿಶ್ಚಿಯನ್- ಹೀಗೆ ಪರಿಶಿಷ್ಟ ಜಾತಿಗಳಲ್ಲಿ ಇರುವ ಎಲ್ಲಕ್ಕೂ ಕ್ರಿಶ್ಚಿಯನ್ ಪದ ಸೇರಿಸಿದ್ದಾರೆ. ಇವರೆನ್ನೆಲ್ಲ ಕ್ರಿಶ್ಚಿಯನ್ ಮಾಡುವ ಉದ್ದೇಶ ಇದರ ಹಿಂದಿದೆಯೇ ಎಂದು ಕೇಳಿದರು. ಕಾಂಗ್ರೆಸ್ ಸರಕಾರದ ಈ ಸಮೀಕ್ಷೆ ಬೂಟಾಟಿಕೆ ಮತ್ತು ಪುಂಡಾಟಿಕೆಯದು ಎಂದು ಆಕ್ಷೇಪಿಸಿದರು. ಯಾವ ಜಾತಿಯಿಂದ ಬಂದವರು, ಯಾವ ಧರ್ಮದಿಂದ ಬಂದವರೆಂದು ನೀವು ಸಮೀಕ್ಷೆಯಲ್ಲಿ ತಿಳಿಸಬೇಕಿಲ್ಲ;

ಇದು ಸರಕಾರಿ ದಾಖಲೆಗೆ ಬೇಕಾಗಿಲ್ಲ. ಇದೆಲ್ಲ ಬಿಟ್ಟು ಕುರುಬ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್- ಹೀಗೆ ಮಾಡುವುದು ಕಾನೂನುಬಾಹಿರ ಎಂದು ಎಚ್ಚರಿಸಿದರು. ಇದನ್ನು ಮಾಡಿದರೆ ಜನಾಂಗಗಳ ಹೋರಾಟ ಸತತವಾಗಿ ಇರಲಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಯಾರೂ ನೆಮ್ಮದಿಯಿಂದ ಇರಬಾರದೆಂಬ ಉದ್ದೇಶ ಸರಕಾರಕ್ಕೆ ಬಂದರೆ, ಇನ್ನು ಹಿಂದುಳಿದ ವರ್ಗಗಳ ಆಯೋಗದ ಸಮೀಕ್ಷಾ ವರದಿ ಹೇಗಿರುತ್ತದೆ ಎಂಬುದು ಜನರಿಗೆ ಬಿಟ್ಟ ವಿಚಾರ ಎಂದು ಆಕ್ಷೇಪ ವ್ಯಕ್ತಪಡಿಸಿದರು.


Spread the love

LEAVE A REPLY

Please enter your comment!
Please enter your name here