ರಾಹುಲ್ ಗಾಂಧಿ ಮೆಚ್ಚಿಸಲು ಸಿದ್ದರಾಮಯ್ಯ ಜಾತಿಗಣತಿ ಮಾಡ್ತಿದ್ದಾರೆ; ರೇಣುಕಾಚಾರ್ಯ ವಾಗ್ದಾಳಿ

0
Spread the love

ದಾವಣಗೆರೆ:- ರಾಹುಲ್ ಗಾಂಧಿ ಮೆಚ್ಚಿಸಲು ಸಿದ್ದರಾಮಯ್ಯ ಜಾತಿಗಣತಿ ಮಾಡ್ತಿದ್ದಾರೆ ಎಂದು ಎಂಪಿ ರೇಣುಕಾಚಾರ್ಯ ವಾಗ್ದಾಳಿ ಮಾಡಿದ್ದಾರೆ.

Advertisement

ನಗರದಲ್ಲಿ ಮಾತನಾಡಿದ ಅವರು, ಜಾತಿಗಳ ನಡುವೆ ಸಂಘರ್ಷದ ಬೆಂಕಿ ಹಚ್ಚುವ ಕೆಲಸ ಸರ್ಕಾರ ಮಾಡುತ್ತಿದೆ. ವೀರಶೈವ ಲಿಂಗಾಯತ ಹಿಂದೂ ಧರ್ಮದ ಕೆಳಗೆ ಬರುತ್ತದೆ. ಈ ಬಗ್ಗೆ ನಾಡಿನ ಪ್ರಮುಖ ಸ್ವಾಮಿಗಳು ಹಾಗೂ ಜಗದ್ಗುರುಗಳು ಧರ್ಮದ ಕಾಲಂನಲ್ಲಿ ಹಿಂದೂ ಎಂದು ಬರೆಸಲು ತಿಳಿಸಿದ್ದಾರೆ. ಉಪಜಾತಿಯನ್ನು ಬರೆಸಲು ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ಬಿಜೆಪಿ ಪಕ್ಷ ಕೂಡ ನಿರ್ಧಾರ ಮಾಡಿದೆ ಎಂದು ತಿಳಿಸಿದ್ದಾರೆ.

ಸಿದ್ದರಾಮಯ್ಯ 2014 ರಲ್ಲಿ ಮಾಡಿದ ತಪ್ಪನ್ನ ಈಗಲೂ ಮಾಡಲು ಮುಂದಾಗುತ್ತಿದ್ದಾರೆ. ವೋಟಿಗೋಸ್ಕರ ಓಲೈಕೆಗೋಸ್ಕರ ಈ ಜಾತಿ ರಾಜಕಾರಣ ಮಾಡುತ್ತಿದ್ದಾರೆ. ಈಗಾಗಲೇ ಕೇಂದ್ರ ಸರ್ಕಾರ ಜಾತಿಗಣತಿ ಮಾಡಲು ಮುಂದಾಗಿದೆ. ಸುಖಾಸುಮ್ಮನೆ ರಾಜ್ಯ ಸರ್ಕಾರ ಜಾತಿ ಗಣತಿ ಮಾಡುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.


Spread the love

LEAVE A REPLY

Please enter your comment!
Please enter your name here