ಸೆ.26ರಿಂದ ಕಾವೇರಿ ಆರತಿ ಕಾರ್ಯಕ್ರಮ: ಸಚಿವ ಚಲುವರಾಯಸ್ವಾಮಿ

0
Spread the love

ಬೆಂಗಳೂರು:-ಸೆ.26ರಿಂದ “ಕಾವೇರಿ ಆರತಿ” ಎಂಬ ಐದು ದಿನಗಳ ಭವ್ಯ ಕಾರ್ಯಕ್ರಮವನ್ನು ಕೆಆರ್‌ಎಸ್‌ನಲ್ಲಿ ಆಯೋಜಿಸಲಾಗಿದೆ ಎಂದು ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.

Advertisement

ಈ ಸಂಬಂಧ ಮಾಧ್ಯಮ ಹೇಳಿಕೆ ನೀಡಿರುವ ಅವರು, ಕೆಆರ್‌ಎಸ್‌ನಲ್ಲಿ ಕನ್ನಡ ನಾಡಿನ ಜೀವನದಿ “ಕಾವೇರಿ ಆರತಿ” ಎಂಬ ಐದು ದಿನಗಳ ಭವ್ಯ ಕಾರ್ಯಕ್ರಮವನ್ನು ಸೆ.26ರಿಂದ ಆಯೋಜಿಸಲಾಗಿದೆ. ಸೆ.26ರ ಸಾಯಂಕಾಲ 5 ಗಂಟೆಗೆ ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ “ಕಾವೇರಿ ಆರತಿ” ಕಾರ್ಯಕ್ರಮಕ್ಕೆ ಶಾಸ್ತ್ರೋಕ್ತವಾಗಿ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ವೀರ ಸಿಂಹಾಸನ ಮಹಾ ಸಂಸ್ಥಾನ ಮಠಾಧ್ಯಕ್ಷರಾದ ಶ್ರೀ ಡಾ. ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮೀಜಿ, ಸಿದ್ಧಗಂಗಾ ಮಠದ ಅಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ, ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ ಎಂದಿದ್ದಾರೆ.

ಈ ಬಾರಿಯ ದಸರಾದಲ್ಲಿ ಸಾಂಕೇತಿಕವಾಗಿ 5 ದಿನಗಳ ಕಾಲ ಕೆಆರ್‌ಎಸ್‌ನಲ್ಲಿ ಕಾವೇರಿ ತಾಯಿಗೆ ಆರತಿ ಮಾಡಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಮಳೆ, ಬೆಳೆ ಒಳ್ಳೆಯದಾಗಲಿ, ರಾಜ್ಯಕ್ಕೆ ಸನ್ಮಂಗಳವಾಗಲಿ ಎಂದು ತಾಯಿ ಕಾವೇರಿಯಲ್ಲಿ ಪೂಜೆ ಮಾಡಿ ಪ್ರಾರ್ಥಿಸಲಾಗುವುದು ಎಂದು ವಿವರಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here