ಕಾರವಾರ:- ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮರ್ಕಿಕೊಡ್ಲು ಗ್ರಾಮದ ಹಲಗೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಯುವತಿ ಸಾವನ್ನಪ್ಪಿರುವ ಘಟನೆ ಜರುಗಿದೆ.
Advertisement
21 ವರ್ಷದ ರಂಜಿತ ನಾಗಪ್ಪ ದೇವಾಡಿಗ ಮೃತ ಯುವತಿ. ಪೋಷಕರು ಕೆಲಸಕ್ಕೆ ಹೋದ ಸಂದರ್ಭದಲ್ಲಿ ಅನಾರೋಗ್ಯ ಸಮಸ್ಯೆಯಿಂದ ಯುವತಿ ಮನೆಯಲ್ಲೇ ಇದ್ದಳು. ಈ ವೇಳೆ ಅವಘಡ ಸಂಭವಿಸಿದೆ.
ಸಿಲಿಂಡರ್ ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.