ಮೈಸೂರು:- ಪಂಚ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರ ಬದುಕು ಸುಧಾರಣೆ ಕಂಡಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಶೀಘ್ರವೇ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ ಸ್ಥಾಪನೆ ಮಾಡಲಾಗುವುದು. ಮಹಿಳೆ ಎಂದರೇ ಸ್ವಾವಲಂಬನೆಯ ಪ್ರತೀಕ. ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ ಕಂಡಿದೆ ಎಂದರು.
ಮಹಿಳೆಯರಿಗೆ ಆರ್ಥಿಕವಾಗಿ ಸ್ವಾವಲಂಬಿ ಜೀವನವನ್ನು ಕಟ್ಟಿಕೊಡಬೇಕು. ದುಡಿಯುವ ಕೈಗಳಿಗೆ ಕೆಲಸ ಕೊಡಬೇಕು. ಮಹಿಳೆಯರು ಸ್ವಾವಲಂಬಿಯಾಗಿ ಜೀವಿಸಲು ಸಹಾಯ ಮಾಡಬೇಕು ಎಂಬ ಚಿಂತನೆಯನ್ನು ಇಟ್ಟುಕೊಂಡು ಸಿಎಂ ಸಿದ್ದರಾಮಯ್ಯ ಅವರು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಮಹಿಳೆಯರನ್ನು ಕೇಂದ್ರೀಕೃತವಾಗಿ ಇಟ್ಟುಕೊಂಡು ಈ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಕೋಟ್ಯಂತರ ಮಹಿಳೆಯರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.


