ರಾಹುಲ್ ಗಾಂಧಿ ಮೆಚ್ಚಿಸಲು ಸರ್ಕಾರ ಜಾತಿಗಣತಿ ಮಾಡುತ್ತಿದೆ: ಪ್ರತಾಪ್ ಸಿಂಹ ಆರೋಪ

0
Spread the love

ದಾವಣಗೆರೆ:ರಾಹುಲ್ ಗಾಂಧಿಯವರನ್ನು ಮೆಚ್ಚಿಸಲು ರಾಜ್ಯ ಸರ್ಕಾರ ಜಾತಿಗಣತಿ ಮಾಡುತ್ತಿದೆ ಎಂದು ಮಾಜಿ ಸಂಸದ ಪ್ರತಾಪ್​ ಸಿಂಹ ಆರೋಪಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು,

Advertisement

ರಾಹುಲ್ ಗಾಂಧಿಯವರನ್ನು ಮೆಚ್ಚಿಸಲು ರಾಜ್ಯ ಸರ್ಕಾರ ಜಾತಿಗಣತಿ ಮಾಡುತ್ತಿದೆ. ಹಿಂದೂಗಳ ಜಾತಿಗಳ ಮುಂದೆ ಕ್ರಿಶ್ಚಿಯನ್​ ಸೇರಿಸಿದ್ದಾರೆ. ಜಾತಿ ಆಧಾರದ ಮೇಲೆ ಹಿಂದೂಗಳನ್ನು ಒಡೆಯಲು ಹೊರಟಿದ್ದಾರೆ ಎಂದರು.

ಇನ್ನೂ ಮೊದಲ ಬಾರಿ ಸಿಎಂ ಆಗಿದ್ದಾಗ ವೀರಶೈವ – ಲಿಂಗಾಯತ ಎಂದು ಒಡೆಯಲು ಸಿದ್ದರಾಮಯ್ಯ ಹೋಗಿದ್ದರು. ಆಗ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿತ್ತು. ಸಿದ್ದರಾಮಯ್ಯ ಹೀನಾಯವಾಗಿ ಸೋತರು. ಈಗ ಜಾತಿ ಗಣತಿ ಹೆಸರಿನಲ್ಲಿ ಬೇರೆ ಬೇರೆ ಧರ್ಮ ಬರೆಸಲು ಅವಕಾಶ ನೀಡಿದ್ದೀರಿ ಎಂದು ಕಿಡಿಕಾರಿದ್ದಾರೆ.


Spread the love

LEAVE A REPLY

Please enter your comment!
Please enter your name here