ಹೊಸಕೋಟೆ:- ಇಲ್ಲಿನ ಕುಂಬಳಹಳ್ಳಿ ಗ್ರಾಮ ಪಂಚಾಯತಿ ಸದಸ್ಯೆ ನಾಗವೇಣಿ ಪತಿ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಹೊಸಕೋಟೆ ತಾಲೂಕಿನ ಕುರುಬರಹಳ್ಳಿಯಲ್ಲಿ ಜರುಗಿದೆ.
Advertisement
38 ವರ್ಷದ ಹರೀಶ್ ಹಲ್ಲೆಗೆ ಒಳಗಾದ ವ್ಯಕ್ತಿ. ಅದೇ ಗ್ರಾಮದ ರಾಮಮೂರ್ತಿ, ಮಣಿ, ರಮೇಶ್ ಮುಂತಾದವರಿಂದ ಹಲ್ಲೆ ಆರೋಪ ಕೇಳಿಬಂದಿದೆ. ಹಲ್ಲೆಯಿಂದ ತಲೆಗೆ ಗಂಭೀರ ಗಾಯಗಳಾಗಿದ್ದು, ಹರೀಶ್ ರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಳೆದ ಚುನಾವಣೆಯಲ್ಲಿ ಹರೀಶ್ ಬಿಜೆಪಿ ಪರ ಕೆಲಸ ಮಾಡಿದ್ದ. ಹಾಗಾಗಿ ರಾಜಕೀಯ ಮುಂದಿಟ್ಟು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಹೊಸಕೋಟೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ಇನ್ನೂ ರಾಜಕೀಯ ಒತ್ತಡದಿಂದ ಪೋಲೀಸರು ಎಫ್ಐ ಆರ್ ಮಾಡಿಲ್ಲ ಎಂಬ ಆರೋಪವೂ ಕೇಳಿಬಂದಿದೆ ಎನ್ನಲಾಗಿದೆ.