ವಿಜಯಸಾಕ್ಷಿ ಸುದ್ದಿ, ಗದಗ: ಗದಗ ತಾಲೂಕಿನ ಕಾರವಾರ ಇಳಕಲ್ಲ ರಾ.ಹೆ. 06 ಕಿ.ಮೀ 245.2ರ ಚೆನ್ನಮ್ಮ ವೃತ್ತ ಮತ್ತು ಬನ್ನಿಕಟ್ಟಿಯ ಹತ್ತಿರ ಹಾಗೂ ಕಿ.ಮೀ 245.40 ರಲ್ಲಿ ಲದ್ವಾ ವೃತ್ತದಿಂದ ಬನ್ನಿಕಟ್ಟೆಯ ರಸ್ತೆ ಭೀಷ್ಮ ಕೆರೆಯ ಹತ್ತಿರ ರಸ್ತೆ ಸುರಕ್ಷತಾ ಕಾಮಗಾರಿಗಳಿಗೆ ಬುಧವಾರ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆಶೋಕ ಮಂದಾಲಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ವರ ವಿಭೂತಿ, ನಗರಸಬೆ ಆಯುಕ್ತ ರಾಜಾರಾಮ ಪವಾರ ಸೇರಿದಂತೆ ಹಿರಿಯರು, ಗಣ್ಯರು ಹಾಜರಿದ್ದರು.



